ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರೆಂಟಿಗಳ ಗೊಂದಲ, ಬಿಜೆಪಿಯಲ್ಲಿನ ಆಂತರಿಕ ಗೊಂದಲ ಹಾಗೂ ಸದ್ಯ ರಾಜಕೀಯ ಚಟುವಟಿಕೆಗಳು ಕುರಿತು ಮಾಹಿತಿ ನೀಡಲು ಬಿಜೆಪಿಯಿಂದ ನಾಳೆ ಮಹತ್ವದ ಸುದ್ದಿಗೋಷ್ಠಿ ನಿಗದಿಯಾಗಿದೆ.ನಾಳಿನ ಸುದ್ದಿಗೋಷ್ಠಿಯ ಬಗ್ಗೆ ಮಾಧ್ಯಮಗಳ ಮುಂದೆ ಮಾಹಿತಿ ನೀಡಿದ್ದಾರೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ.ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜಯನಗರದ ಸರೋಜಿನಿ ಮುತ್ತಣ್ಣರ ನಿವಾಸಕ್ಕೆ ಭೇಟಿ ಕೊಟ್ಟ ಬಿ.ವೈ.ವಿಜಯೇಂದ್ರ. ಸರೋಜಿನಿ ಮುತ್ತಣ್ಣ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜೊತೆಗೆ ಒಡನಾಡಿ ಆಗಿದ್ದವರು. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ, ಅವರ ಒಡನಾಡಿಗಳನ್ನು ಭೇಟಿ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿರುವ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಅವರ ಒಡನಾಡಿಗಳನ್ನು ಭೇಟಿ ಮಾಡುವ ಕಾರ್ಯಕ್ರಮ ಇದಾಗಿದೆ. ನಾನು ಸರೋಜಿನಿ ಮುತ್ತಣ್ಣರ ನಿವಾಸಕ್ಕೆ ಬಂದಿದ್ದೇನೆ. 1989 ರಲ್ಲಿ ಸರೋಜಿನಿ ಮುತ್ತಣ್ಣ ಅವರು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಅನ್ನಭಾಗ್ಯ ಹಣ, ಗೃಹ ಲಕ್ಷ್ಮಿ ನಿಧಿ ವಿಳಂಬ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ಸುದ್ದಿಗೋಷ್ಟಿ ನಡೆಸುತ್ತೇನೆ. ಕಾಂಗ್ರೆಸ್ ನ ಗ್ಯಾರಂಟಿ ಕ್ರೈಸಿಸ್, ರಾಜಕೀಯ ಕ್ರೈಸಿಸ್ ಗಳ ಬಗ್ಗೆ ನಾಳೆ ಮಾತಾಡ್ತೇನೆ. 20ರೊಳಗೆ ಪಕ್ಷದಲ್ಲಿನ ಎಲ್ಲಾ ಗೊಂದಲ ಸರಿಯಾಗಲಿದೆ ಎಂಬ ತಮ್ಮ ಹೇಳಿಕೆಗೆ ವಿಜಯೇಂದ್ರ ಸ್ಪಷ್ಟನೆ ನೀಡಿ ನಿಮ್ಮ ಎಲ್ಲ ಪ್ರಶ್ನೆಗಳಿಗೂ ನಾಳೆಯೇ ಉತ್ತರ ಕೊಡ್ತೇನೆ ರಾಜಕೀಯ ವಿಚಾರವೂ ನಾಳೆಯೇ ಮಾತಾಡ್ತೇನೆ ಎಂದು ತಿಳಿಸಿದ್ದಾರೆ.
ಯತ್ನಾಳ್ ತಂಡದಿಂದ ಮತ್ತೆ ಸಭೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿ, ಅವರು ಹಿರಿಯರು ಇದ್ದಾರೆ. ಸಭೆ ಕರೆದು ಪಕ್ಷ ಬಲಪಡಿಸುವ ಚರ್ಚೆ ಮಾಡ್ತಾರೆ. ಅದಕ್ಕೆ ನಾನು ಯಾಕೆ ಬೇಡ ಅನ್ನಲಿ?. ನಾನು ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. .ಯಾರೇನೇ ಮಾಡಿದರೂ ಪಕ್ಷಕ್ಕೆ ಪೂರಕವಾಗಿ ಮಾಡ್ತಾರೆ ಅನ್ನೋದು ನನ್ನ ಅಭಿಲಾಷೆ ಎಂದಿದ್ದಾರೆ.