ಬೆಂಗಳೂರು: ನಾಳೆ ಸಚಿವ ಸಚಿವ ಜಮೀರ್ ಅಹ್ಮದ್ ಖಾನ್ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.ಎಸಿಬಿಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಲಿರುವ ಜಮೀರ್ ಅವರನ್ನು ಈ ಹಿಂದೆ ಅವರ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು.
ಜಮೀರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಮಹತ್ವದ ದಾಖಲೆಗಳನ್ನ ಎಸಿಬಿ ವಶಪಡೆದಿದ್ದು, ಅಸಮತೋಲನ ಆಸ್ತಿ ಗಳಿಕೆ ಹಿನ್ನೆಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು.
ಆನಂತರ ಎಸಿಬಿ ರದ್ದು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಆ ಪ್ರಕರಣವನ್ನ ಈಗ ತನಿಖೆ ನಡೆಸ್ತಿರೋ ಲೋಕಾಯುಕ್ತ ನಾಳೆ ವಿಚಾರಣೆಗೆ ಹಾಜರಾಗುವಂತೆ ಜಮೀರ್ಗೆ ನೊಟೀಸ್ ನೀಡಿದ್ದು ನಾಳೆ ವಿಚಾರಣೆಗೆ ಹಾಜರಾಗಲಿದ್ದಾರೆ.