ಬೆಂಗಳೂರು: ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಗ್ಗೆ 10 ಗಂಟೆಗೆ ಹೆಚ್ಎಎಲ್ನಿಂದ ವಿಮಾನದಲ್ಲಿ ಹೊರಟು 10:50ಕ್ಕೆ ಕೊಪ್ಪಳದ ಗಿಣಿಗೇರಾ ಏರ್ಸ್ಟ್ರಿಪ್ಗೆ ತಲುಪಲಿದ್ದಾರೆ.
ನಂತರ ಗಿಣಿಗೇರಾದಿಂದ ರಸ್ತೆ ಮಾರ್ಗವಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಮಧ್ಯಾಹ್ನ 12.30ಕ್ಕೆ ತಲುಪಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಲಮಟ್ಟಿ ಜಲಾಯಶದ ಬಳಿ ಮೊದಲಿಗೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಬಾಗಿನ ಅರ್ಪಿಸಲಿದ್ದಾರೆ.
ಬಳಿಕ ಮದ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಮತ್ತೆ ಗಿಣಿಗೇರಾಕ್ಕೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಎಂ ಬಿ ಪಾಟೀಲ್, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ ಸೇರಿದಂತೆ ಉಭಯ ಜಿಲ್ಲೆಯ ಶಾಸಕರು ಅಧಿಕಾರಿಗಳು ಭಾಗಿಯಾಗಲಿದ್ದಾರೆ.