ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಹಿರಿಕಳಲೆ ಗ್ರಾಮದ ಶ್ರೀ ಕರಿಯಮ್ಮ ದೇವಿ ನೂತನ ವಿಗ್ರಹ ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಕುಂಭಾಭಿಷೇಕ ದೇವಸ್ಥಾನ ಅದ್ದೂರಿ ಲೋಕಾರ್ಪಣೆ ಸಮಾರಂಭ ಅದ್ದೂರಿಯಾಗಿ ಜರಗಲಿದೆ ಎಂದು ಜಿ.ಪಂ ಮಾಜಿ ಸದಸ್ಯ ಐಪನಹಳ್ಳಿ ನಾಗೇಂದ್ರ ಕುಮಾರ್ ತಿಳಿಸಿದರು.
ಪಟ್ಟಣದ ಜಯನಗರ ಬಡಾವಣೆಯಲ್ಲಿರುವ ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್ ಕಚೇರಿಯಲ್ಲಿದೇವಾಲಯದ ಲೋಕಾರ್ಪಣೆ ಸಮಾರಂಭ ಕರಪತ್ರ ಬಿಡುಗಡೆಗೊ
ಳಿಸಿ ಮಾತನಾಡಿದರು.ಹಿರಿಕಳಲೆ ಗ್ರಾಮದ ಶ್ರೀ ಕರಿಯಮ್ಮ ದೇವಿ ದೇವಸ್ಥಾನದ ಉದ್ಘಾಟನೆ ಫೆ. 19-2-2025 ರಿಂದ 21-2-2025 ವರಗೆ ಮೂರು ದಿನಗಳ ಕಾಲ ಅದ್ದೂರಿಯಾಗಿ ಜರುಗಲಿದೆ ಈ ವಿಶೇಷ ದೇವತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಉದ್ಘಾಟನೆಯನ್ನು ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ,ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಗೌರವ ಅಧ್ಯಕ್ಷತೆ ಶಾಸಕ ರವಿಶಂಕರ್,
ಮಾಜಿ ಸಚಿವ ಕೆ.ಸಿ ನಾರಾಯಣಗೌಡ, ಮಾಜಿ ಶಾಸಕ ಕೆ,ಬಿ ಚಂದ್ರಶೇಖರ್ ಜ್ಯೋತಿ ಬೆಳಗಿಸುವವರು ಶಾಸಕ ಹೆಚ್.ಟಿ ಮಂಜು, ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಬಿ.ಪ್ರಕಾಶ್,ಮನ್ಮುಲ್ ನಿರ್ದೇಶಕ ಡಾಲು ರವಿ,ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಜಿ. ಪಂ ಮಾಜಿ ಉಪಾಧ್ಯಕ್ಷ ಕೆಎಸ್ ಪ್ರಭಾಕರ್, ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ್ ರಾಮೇಗೌಡ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಹಾಗಾಗಿ ಸಾರ್ವಜನಿಕ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್, ಶ್ರೀ ಸಿದ್ಧರಾಮೇಶ್ವರ ಹಾಗೂಶ್ರೀ ಕರಿಯಮ್ಮದೇವಿ ಸೇವಾ ಟ್ರಸ್ಟ್ ಅಧ್ಯಕ್ಷ. ಎಲ್.ಐ.ಸಿ ರವಿ ಉಪಾಧ್ಯಕ್ಷ ಹೆಚ್ ಎಮ್ ಕೃಷ್ಣೇ
ಗೌಡ , ಕಾರ್ಯದರ್ಶಿ ಡೈರಿ ಹೆಚ್.ಜೆ.ಮಂಜೇಗೌಡ, ತಾಲ್ಲೂಕು ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಚಂದ್ರು ಕಾಡುಮೆಣಸ ಸೇರಿದಂತೆ ಇತರರು ಉಪಸ್ಥಿತರಿದ್ದರು.