ಮೈಸೂರು: ಸಿಎಂಗೆ ಕೆಲವು ನಿರ್ದಿಷ್ಟ ಪ್ರಶ್ನೆಗಳನ್ನು ಕೇಳಲೇಬೇಕು. ಕೇಳದಿದ್ದರೆ ತನಿಖಾಧಿಕಾರಿ ವಿರುದ್ಧವೇ ಕಾನೂನು ಹೋರಾಟ ಮಾಡುತ್ತೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿಚಾರಣೆ ಎದುರಿಸುತ್ತಿರುವ ಕುರಿತು ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ಸಿಎಂಗೆ ನಿರ್ದಿಷ್ಟವಾಗಿ ಕೆಲವು ಪ್ರಶ್ನೆ ಕೇಳಲು ದೂರುದಾರನಾಗಿ ನಾನು ಒಂದು ಮನವಿಯನ್ನು ಲೋಕಾಯುಕ್ತರಿಗೆ ಕೊಟ್ಟಿದ್ದೇನೆ. ತನಿಖಾಧಿಕಾರಿ ಆ ಪ್ರಶ್ನೆಗಳನ್ನು ಆರೋಪಿ ಸ್ಥಾನದಲ್ಲಿ ಇರುವವರಿಗೆ ಕೇಳಬೇಕು. ಕೇಳದೆ ಇದ್ದರೆ ವಿಚಾರಣೆ ಪರಿಪೂರ್ಣ ಆಗಲ್ಲ. ಒಂದು ವೇಳೆ ಅವರು ಪ್ರಶ್ನೆ ಕೇಳದೆ ಇದ್ದರೆ ಲೋಕಾಯುಕ್ತ ತನಿಖಾಧಿಕಾರಿ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದರು.
ಇವತ್ತಿನ ವಿಚಾರಣೆ ವೇಳೆ ಸಿದ್ದರಾಮಯ್ಯ ಅವರು ಸಿಎಂ ಅಲ್ಲ. ಒಬ್ಬ ಆರೋಪಿ ಅಷ್ಟೇ. ಇದನ್ನು ತನಿಖಾಧಿಕಾರಿ ಮರೆಯಬಾರದು ಎಂದು ಹೇಳಿದರು.