ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳು, ನಿಗಮ, ಮಂಡಳಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿಗಳು, ನೌಕರರನ್ನು ಕೆಲಸದಿಂದ ಬಿಡುಗಡೆ ಮಾಡುವಂತೆ ಆದೇಶಿಸಿದ್ದ ಸಿಎಂ ಸಿದ್ದರಾಮಯ್ಯ ಅವರೇ ಇದೀಗ ನಿವೃತ್ತ ಅಧಿಕಾರಿಯ ನೇಮಕಕ್ಕೆ ಆದೇಶ ನೀಡಿದ್ದಾರೆ.
ಕೊಳಗೇರಿ ಅಭಿವೃದ್ಧಿ ಮಂಡಳಿ ಎಂಜಿನಿ ಯರ್ ಆಗಿದ್ದ ಎನ್.ಪಿ. ಬಾಲರಾಜು ಅವರು, ನಿವೃತ್ತಿಯಾಗಿ ಒಂದೇ ದಿನದಲ್ಲಿ ಅದೇ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಮಹತ್ವದ ಹುದ್ದೆ ಪಡೆದುಕೊಂಡಿದ್ದಾರೆ. ಆಗಸ್ಟ್ ೩೧ರಂದು ನಿವೃತ್ತಿ ಯಾಗಿದ್ದ ಎನ್.ಪಿ. ಬಾಲರಾಜು ಅವರನ್ನು ಸೆಪ್ಟೆಂಬರ್ ೧ರಿಂದ ಮಂಡಳಿಯ ಮುಖ್ಯ ತಾಂತ್ರಿಕ ಸಲಹೆಗಾರರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಲಿ ಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಸರ್ಕಾರಿ ಅಧಿ ಕಾರಿ ಹಾಗೂ ನೌಕರರ ನೇಮಕಾತಿ ಸರ್ಕಾರಕ್ಕೆ ಹೊರೆ ಆಗಿರುವುದನ್ನು ಮನಗಂಡು ರಾಜ್ಯ ಸರ್ಕಾರದ ಅಂದಿನ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಜೂನ್ ೧೪ರಂದು ನಿವೃತ್ತ ಗುತ್ತಿಗೆ ನೌಕರರನ್ನು ಕೂಡಲೇ ಸೇವೆಯಿಂದ ಬಿಡುಗಡೆ ಗೊಳಿಸುವಂತೆ ಆದೇಶ ಹೊರಡಿಸಿದ್ದರು.
ಜಮೀರ್ ಒತ್ತಡಕ್ಕೆ ಮಣಿದ್ರಾ ಸಿಎಂ?: ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ ೨೨ರಂದು ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಟಿಪ್ಪಣಿ ಕಳಿಸಿ, ಬಾಲರಾಜು ಅವರನ್ನು ಸಲಹೆಗಾರ ಹುದ್ದೆಗೆ ನೇಮಕ ಮಾಡಲು ಕ್ರಮಕೈಗೊಳ್ಳಲು ಸೂಚಿಸಿದ್ದು, ಕಳಂಕಿತ ಅ ಕಾರಿಯ ನೇಮಕದಲ್ಲಿ ವಸತಿ ಸಚಿವ ಜಮೀರ್ ಅಹಮದ್ ಪ್ರಭಾವ ಬೀರಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿಗಳ ಆದೇಶದಲ್ಲೇನಿದೆ?, ೦೩೬೦ ನಿವೃತ್ತ ಹಿರಿಯ ಅಧಿಕಾರಿಗಳ ವಜಾ:
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಆರ್ಥಿಕ ಹೊರೆ ತಪ್ಪಿಸಲು ಸಿಎಂ ಸಿದ್ದರಾಮಯ್ಯ ಅವರು, ಆರ್ಥಿಕ ಹೊರೆ ಇಳಿಸಲು ಕಳೆದ ಜೂನ್ನಲ್ಲಿ ನಿವೃತ್ತ ಹಿರಿಯ ಅಧಿಕಾರಿಗಳನ್ನು ವಜಾ ಮಾಡಲು ಆದೇಶ ನೀಡಿದ್ದರು. ಈ ಆದೇಶದ ಬಳಿಕ ೩೬೦ಕ್ಕೂ ಹೆಚ್ಚು ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು, ನಿವೃತ್ತ ಎಂಜಿನಿಯರ್ ಗಳು, ಲೆಕ್ಕಾಧಿಕಾರಿಗಳು ಸೇರಿ ಅನೇಕ ಹುದ್ದೆಯಲ್ಲಿನ ಅಧಿಕಾರಿ, ಸಿಬ್ಬಂದಿಯನ್ನು ಸರ್ಕಾರ ವಜಾ ಮಾಡಿತ್ತು.
ಸಿಎಂ ಆದೇಶದಲ್ಲಿ ಏನಿದೆ?: ಜ.೯ರಂದು ಆದೇಶ ಹೊರಡಿಸಿದ್ದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರದ ಕೆಲವು ಇಲಾಖೆಗಳು, ಸಚಿವಾಲಯದಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅಧಿಕಾರಿ, ನೌಕರರನ್ನು ಅನಗತ್ಯವಾಗಿ ಹುದ್ದೆಗಳನ್ನು ಸೃಜಿಸಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಇವರಿಗೆ ವೇತನ, ವಾಹನ ಸೌಲಭ್ಯ ಇನ್ನಿತರೆ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಲ್ಲದೆ ಕಾರ್ಯಕ್ಷಮತೆಯ ಗುಣಮಟ್ಟ ಹಾಗೂ ಉತ್ತರದಾಯಿತ್ತದ ಕೊರತೆಯೂ ಎದ್ದು ಕಾಣುತ್ತಿದೆ ಎಂದು ಉಲ್ಲೇಖಿಸಿದ್ದರು.
ಬಾಲರಾಜು ಮೇಲೆ ಗುರುತರ ಆರೋಪ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಲ್ಲಿ ಮುಖ್ಯ ಎಂಜಿನಿಯರ್ ಆಗಿದ್ದ ಎನ್.ಪಿ. ಬಾಲರಾಜು ಅವರ ಆಸ್ತಿಗಳ ಮೇಲೆ ಕಳೆದ ೨೦೨೩ರ ಅಕ್ಟೋಬರ್ ೩೧ ರಂದು ಲೋಕಾಯುಕ್ತ ದಾಳಿ ನಡೆದಿತ್ತು. ಈ ವೇಳೆ ಅವರ ಆಸ್ತಿಗಿಂತ ಶೇ.೨೨೭.೪೬೯ರಷ್ಟು ಹೆಚ್ಚು ಆಸ್ತಿ ಪತ್ತೆ ಆಗಿತ್ತು