ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಡಿನ ಹಲವಾರು ಗಣ್ಯರು ಚೋಪ್ರಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪ್ಯಾರಿಸ್ ಕ್ರೀಡಾಕೂಟದಲ್ಲಿ ನೀರಜ್ ಚೋಪ್ರಾ ಅವರು ಜಾವೇಲಿನ್ ಎಸೆತದಲ್ಲಿ ಬೆಳ್ಳಿ ಪದಕ ಗೆದ್ದಿರುವುದು ಭವಿಷ್ಯದ ಪೀಳಿಗೆಗೆ ಉತ್ಕೃಷ್ಟತೆಯ ಅನ್ವೇಷಣೆಯಲ್ಲಿ ಪ್ರೇರೇಪಿಸುವ ಸಾಧನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.
ನೀರಜ್ ಚೋಪ್ರಾ ಒಬ್ಬ ಶ್ರೇಷ್ಠ ವ್ಯಕ್ತಿ! ಪದೇ ಪದೇ ಅವರು ತಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಅವರು ಮತ್ತೊಂದು ಒಲಿಂಪಿಕ್ ಯಶಸ್ಸಿನೊಂದಿಗೆ ಹಿಂತಿರುಗಿದ್ದಾರೆ ಎಂದು ಭಾರತವು ಉತ್ಸುಕವಾಗಿದೆ. ಬೆಳ್ಳಿ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಬರೆದಿದ್ದಾರೆ.