ದೆಹಲಿ: ದೆಹಲಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಪಕ್ಷದ ನಾಯಕಿ ಸೋನಿಯಾಗಾಂಧಿ ಉದ್ಘಾಟಿಸಿದ್ದಾರೆ. ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿನ್ನೆ ಸಂಜೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕೆಲ ಸಚಿವರು ಮತ್ತು ಶಾಸಕರು ದೆಹಲಿಗೆ ತೆರಳಿದ್ದರು.
ಇಂದು ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ ರಾಜ್ಯದ ಕೆಲ ಸಚಿವರು ಮತ್ತು ಶಾಸಕರಿಗೆ ಸಮಾರಂಭಕ್ಕೆ ಅಧಿಕೃತ ಪಾಸ್ ಇಲ್ಲದ ಕಾರಣ ಅವರನ್ನು ಕಾರ್ಯಕ್ರಮ ಸ್ಥಳಕ್ಕೆ ಬಿಟ್ಟಿಲ್ಲ. ಸಚಿವರಾದ ಬೈರತಿ ಸುರೇಶ್, ಎಂ.ಸಿ. ಸುಧಾಕರ್, ಶಾಸಕರಾದ ಅಶೋಕ್ ಪಟ್ಟಣ್, ಪೊನ್ನಣ್ಣ ಅವರನ್ನು ಭದ್ರತಾ ಸಿಬ್ಬಂದಿ ತಡೆದು ಅಲ್ಲಿಂದ ವಾಪಸ್ ಕಳಿಸಿದ್ದಾರೆ ಎಂದು ಹೇಳಲಾಗಿದೆ.