ಬೆಂಗಳೂರು: ಡ್ರಗ್ಸ್ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ಇಂದು ಭರ್ಜರಿ ಬೇಟೆಯಾಡಿದ್ದಾರೆ. ಬೆಂಗಳೂರಿನಲ್ಲಿ ವಿದೇಶಿ ಮಹಿಳೆಯೊಬ್ಬರಿಂದ 24 ಕೋಟಿ ಮೌಲ್ಯದ 12 ಕೆಜಿ ನಿಷೇಧಿದ MDMA ಕ್ರಿಸ್ಟಲ್ ಅನ್ನು CCB ಮಾದಕ ದ್ರವ್ಯ ನಿಗ್ರಹ ದಳ ಜಪ್ತಿ ಮಾಡಿದೆ. ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೆ.ಆರ್.ಪುರಂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿದ್ದಾರೆ.
ಬಂಧಿತ ವಿದೇಶಿ ಮಹಿಳೆಯಿಂದ 12 ಕೆಜಿ ನಿಷೇಧಿದ ಎಂಡಿಎಂಎ, ಒಂದು ಮೊಬೈಲ್, 70 ಏರ್ಟೆಲ್ ಸಿಮ್ ಕಾರ್ಡ್ ಗಳನ್ನು ಜಪ್ತಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ. ಇದೇ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.