ಫಸ್ಟ್ ಲುಕ್ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ವಿಶಿಷ್ಟ ಶೀರ್ಷಿಕೆಯುಳ್ಳ ನೋಡಿದವರು ಏನಂತಾರೆ ಚಿತ್ರ ಪ್ರೇಕ್ಷಕರಿಗೆ ಒಂದು ಹೊಸ ಅನುಭವ ನೀಡಲು ಸಿದ್ಧವಾಗಿದೆ. ಈ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಅವರು ಬರೆದು ನಿರ್ದೇಶಿಸಿದ್ದು, ನಾಗೇಶ್ ಗೋಪಾಲ್ ಅವರು ನಿರ್ಮಾಣ ಮಾಡಿದ್ದಾರೆ.
‘ನೋಡಿದವರು ಏನಂತಾರೆ ಸಿನಿಮಾಗೆ ಪ್ರತಿಭಾತ್ವಿತ ನಟ ನವೀನ್ ಶಂಕರ್ ಸಾಥ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ನವೀನ್ ನಾಯಕನಟನಾಗಿ ನಟಿಸಿದ್ದು, ಅಪೂರ್ವ ಭಾರದ್ವಾಜ್ ರವರು ನಾಯಕಿ ಅಭಿನಯಿಸಿದ್ದಾರೆ. ಹೊಯ್ಸಳ, ಕ್ಷೇತ್ರಪತಿ ಮತ್ತು ಸಲಾರ್ ಸಿನಿಮಾಗಳಲ್ಲಿ ರಗಡ್ ಹಾಗೂ ಇಂಟೆನ್ಸ್ ಪಾತ್ರಗಳ ಮೂಲಕ ಎಲ್ಲರ ಗಮನಸೆಳೆದಿದ್ದ ನವೀನ್ ಶಂಕರ್ ಅವರು ಈ ಸಿನಿಮಾದಲ್ಲಿ ವಿಭಿನ್ನವಾಗಿ ಕಾಣಿಸಲಿದ್ದಾರೆ.
ನಿರ್ದೇಶಕರ ಹೇಳುವಂತೆ ನವೀನ್ ಶಂಕರ್ ಅವರ ಪಾತ್ರ ನಮ್ಮೆಲ್ಲರ ಒಳಗಿರುವ ಒಬ್ಬ ಮನುಷ್ಯನ ಕಥೆ ಹಾಗು ಭಾವನೆಗಳನ್ನು ಹೇಳುತ್ತದೆ. ಜೀವನದಲ್ಲಿ ನಮ್ಮ ಅಸ್ತ್ವಿತ್ವದ ಬಗ್ಗೆಯೇ ನಮಗೆ ಕಾಡುವ ಪ್ರಶ್ನೆಗಳು, ಪ್ರೀತಿ, ಆತ್ಮಾವಲೋಕನ ಹಾಗೂ ಬಾಂಧವ್ಯಗಳ ಸುತ್ತ ಈ ಸಿನಿಮಾ ಸಾಗುತ್ತದೆ.ಕರ್ನಾಟಕದ ಪ್ರೇಕ್ಷಣೀಯ ಹಾಗೂ ಯಾರೂ ಕಂಡಿರದ ಸುಂದರ ತಾಣಗಳಲ್ಲಿ ನೋಡಿದವರು ಏನಂತಾರೆ ಸಿನಿಮಾ ಚಿತ್ರೀಕರಣಗೊಂಡಿದೆ.
ಆಶ್ವಿನ್ ಕೆನೆಡಿ ಛಾಯಾಗ್ರಾಹಕರಾಗಿ ಆಕರ್ಷಕ ದೃಶ್ಯಗಳ ಮೂಲಕ ಕಥೆಯನ್ನು ಜೀವಂತವಾಗಿಸಿದ್ದಾರೆ. ಮಯೂರೆಶ್ ಅಧಿಕಾರಿ ಹೃದಯಸ್ಪರ್ಶಿ ಸಂಗೀತವನ್ನು ಸಂಯೋಜಿಸಿದ್ದಾರೆ. ಮನು ಶೆಡಗಾರ್ ಸಂಕಲನ ಚಿತ್ರಕ್ಕಿದೆ. ಕುಲದೀಪ್ ಕಾರಿಯಪ್ಪ ಅವರು ಬರೆದ ಕಥೆ ಮತ್ತು ಚಿತ್ರಕಥೆಗೆ ಅವರೊಂದಿಗೆ ಸಾಯಿ ಶ್ರೀನಿಧಿ, ಪ್ರಜ್ವಲ್ ರಾಜ್, ಮತ್ತು ಸುನಿಲ್ ವೆಂಕಟೇಶ್ ಸಂಭಾಷಣೆ ಬರೆದಿದ್ದಾರೆ.
ಖ್ಯಾತ ಲೇಖಕ ಹಾಗು ಸಾಹಿತಿ ಜಯಂತ್ ಕಾಯ್ಕಿಣಿ ಎರಡು ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಒಂದು ಹಾಡಿಗೆ ಲೈಲಾ ಪದ ಪೊಣಿಸಿದ್ದಾರೆ. ಸಾಧು ಕೋಕಿಲ, ಅನನ್ಯಾ ಭಟ್ ಮತ್ತು ಕೀರ್ತನ್ ಹೊಳ್ಳಾ ಹಾಗೂ ಅಮೇರಿಕಾದ ಗಾಯಕ ಜೋರ್ಡನ್ ರಾಬರ್ಟ್ ಕಿರ್ಕ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಜನವರಿ 31, 2025 ರಂದು ಬಿಡುಗಡೆಯಾಗ್ತಿರುವ ನೋಡಿದವರು ಏನಂತಾರೆ ಚಿತ್ರ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ.