ಬೆಳಗಾವಿ: ಮೀಸಲಾತಿಗಾಗಿ ಒತ್ತಾಯಸಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ನಡೆಸಿದ ಲಾಠಿ ಚಾರ್ಜ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿಂದು ಮಾತನಾಡಿರುವ ಅವರು, ನಾವು ಯಾವುದೇ ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡಿಲ್ಲ. ನ್ಯಾಯಕ್ಕಾಗಿ ಹೋರಾಡುತ್ತಿದ್ದವರ ಮೇಲೆ ಅಮಾನುಷವಾಗಿ ಲಾಠಿಚಾರ್ಜ್ ಮಾಡಲಾಗಿದೆ. ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ರಾಜ್ಯ ಸರ್ಕಾರ ವಿರುದ್ಧ ಅವರು ಗುಡುಗಿದ್ದಾರೆ.
ಮತ್ತೊಂದು ಎಡೆ ಇಂದು ಬೆಳಿಗ್ಗೆ ಸುವರ್ಣಸೌಧದ ಮುಂಭಾಗ ದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಬಿಜೆಪಿ ಶಾಸಕರು ಲಾಠಿಚಾರ್ಜ್ ಪ್ರಕರಣವನ್ನು ಖಂಡಿಸಿ ಪ್ರತಿಭಟನಾ ಧರಣಿ ನಡೆಸಿ ಘೋಷಣೆ ಕೂಗಿದ್ದಾರೆ.ಇದೇ ವೇಳೆ ಹಿರೇ ಬಾಗೇವಾಡಿಯ ಟೋಲ್ ಬಳಿ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ವ್ಯಕ್ತಪಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ 200ಕ್ಕೂ ಹೆಚ್ಡು ಪೊಲೀಸರನ್ನು ಬಂದೋಬಸ್ತ್ಗಾಗಿ ನಿಯೋಜನೆ ಮಾಡಲಾಗಿದೆ.ಪಂಚಮಸಾಲಿ ಸಮುದಾಯದಿಂದ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.ಹುಬ್ಬಳ್ಳಿಯ ಹುಣಕಲ್ ಬಳಿ ಹಾಗೂ ಗದಗದ ಡಿ.ಸಿ. ಕಚೇರಿ ವೃತ್ತದ ಬಳಿಯೂ ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಡಲಾಗಿದೆ.