ಚಾಮರಾಜನಗರ: ಬಾಲಕಾರ್ಮಿಕ ಪದ್ಧತಿ ಯಿಂದ ಮುಕ್ತಗೊಂಡ ಸಂತ್ರಸ್ತ ಮಕ್ಕಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಅವರು ಆಹಾರ ಕಿಟ್ಗಳನ್ನು ವಿತರಣೆ ಮಾಡಿದರು.ನಗರದ ಜಿಲ್ಲಾ ನ್ಯಾಯಾಲಯದ ವ್ಯಾಜ್ಯ ಪೂರ್ವ ಸಭಾಂಗಣದಲ್ಲಿಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಬಾಲ ಯೋಜನಾ ಸೊಸೈಟಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಕಾರ್ಮಿಕತೆಯಿಂದ ಮುಕ್ತಗೊಂಡ ಸಂತ್ರಸ್ತ ಬಾಲಕರಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ತಾತ್ಕಾಲಿಕವಾಗಿ ಆಹಾರ ಕಿಟ್ಗಳನ್ನು ವಿತರಿಸಿದರು.
ಇದೇ ವೇಳೆ ಮಾತನಾಡಿದ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಅವರು ಕಾರ್ಮಿಕ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯು ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಗುರುತಿಸಿ, ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸಲು ಮುಂದಾಗಿದೆ. ಇದು ಉತ್ತಮ ಬೆಳವಣಿಗೆಯಾಗಿದೆ. ಸರ್ಕಾರದ ಈ ಯೋಜನೆ ಸದ್ಭಳಕೆಯಾಗಬೇಕು ಎಂದರು.
ಬಾಲಕಾರ್ಮಿಕ ಪದ್ದತಿ ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಬಡತನದ ಬಾಧೆ ತಾಳಲಾರದೇ ಬಾಲಕಾರ್ಮಿಕರಾಗುವ ಮಕ್ಕಳು ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊ ಳ್ಳುತ್ತಿದ್ದಾರೆ. ಅಂತಹ ಬಾಲಕಾರ್ಮಿಕರನ್ನು ಗುರುತಿಸಿ, ಮುಕ್ತಿಗೊಳಿಸಿ ತಾತ್ಕಾಲಿಕವಾಗಿ ಅವರ ಜೀವನ ನಿರ್ವಹಣೆಗಾಗಿ ಆಹಾರದ ಕಿಟ್ ನೀಡಲಾಗುತ್ತಿದೆ. ಬಾಲಕಾರ್ಮಿಕv ಯಿಂದ ಮುಕ್ತಗೊಂಡ ಮಕ್ಕಳ ಶಿಕ್ಷಣ ಮುಂದುವರಿಕೆಗೂ ಸಹ ಇಲಾಖೆ ಅವಕಾಶ ಕಲ್ಪಿಸಿದೆ ಎಂದು ನ್ಯಾಯಾಧೀಶರಾದ ಈಶ್ವರ್ ಅವರು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ. ಎಂ. ಸವಿತ ಅವರು ಮಾತನಾಡಿ ಬಾಲಕಾರ್ಮಿಕರನ್ನು ಗುರುತಿಸಿ ರಕ್ಷಿಸುವುದು ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ಪ್ರಸ್ತುತ ಗುರುತಿಸಲಾಗಿರುವ ಬಾಲ ಕಾರ್ಮಿಕರಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ (ಎಸ್.ಸಿ.ಪಿ, ಟಿಎಸ್.ಪಿ) ಉಪಯೋಜನೆಗಳಡಿ ಪುನರ್ವಸತಿ ಕಲ್ಪಿ ಸಲಾಗುತ್ತಿದೆ. ಬಾಲಕಾರ್ಮಿಕ ಪದ್ದತಿಯಿಂದ ಮುಕ್ತಗೊಳಿಸಿದ ಬಳಿಕ ಮಕ್ಕಳಿಗೆ ತೊಂದರೆಯಾಗದಂತೆ ತಕ್ಷಣವೇ ಅಗತ್ಯ ಆಹಾರದ ಪರಿಕರಗಳನ್ನು ಒದಗಿಸಲಾಗುತ್ತದೆ ಎಂದರು.
ಬಾಲಕಾರ್ಮಿಕ ಮಕ್ಕಳಲ್ಲಿ ಕೀಳಿರಿಮೆ ಹೋಗಲಾಡಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಇಲಾಖೆ ಸತತ ಪ್ರಯತ್ನ ಮಾಡುತ್ತಿದೆ. ಅಂತಹ ಮಕ್ಕಳ ಮುಂದಿನ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಶೈಕ್ಷಣಿಕ ವ್ಯವಸ್ಥೆಯಡಿ ಸರ್ಕಾರಿ ಶಾಲೆ ಹಾಗೂ ಅಗತ್ಯವಿದ್ದರೆ ವಿದ್ಯಾರ್ಥಿನಿಲಯಗಳಲ್ಲಿಯೂ ಅವಕಾಶ ಮಾಡಿಕೊಡಲಾಗುತ್ತದೆ. ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪು ಗೊಳ್ಳಲು ಉನ್ನತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಡಾ. ಸವಿತಾ ಅವರು ತಿಳಿಸಿದರು.
ಜಿಲ್ಲಾ ಬಾಲ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಮಹೇಶ್ ಅವರು ಇದೇ ವೇಳೆಹಾಜರಿದ್ದರು.ಚಾಮರಾಜನಗರ: ಬಾಲಕಾರ್ಮಿಕ ಪದ್ಧತಿ ಯಿಂದ ಮುಕ್ತಗೊಂಡ ಸಂತ್ರಸ್ತ ಮಕ್ಕಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಅವರು ಆಹಾರ ಕಿಟ್ಗಳನ್ನು ವಿತರಣೆ ಮಾಡಿದರು.
ನಗರದ ಜಿಲ್ಲಾ ನ್ಯಾಯಾಲಯದ ವ್ಯಾಜ್ಯ ಪೂರ್ವ ಸಭಾಂಗಣದಲ್ಲಿಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಬಾಲ ಯೋಜನಾ ಸೊಸೈಟಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಕಾರ್ಮಿಕತೆಯಿಂದ ಮುಕ್ತಗೊಂಡ ಸಂತ್ರಸ್ತ ಬಾಲಕರಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ತಾತ್ಕಾಲಿಕವಾಗಿ ಆಹಾರ ಕಿಟ್ಗಳನ್ನು ವಿತರಿಸಿದರು.
ಇದೇ ವೇಳೆ ಮಾತನಾಡಿದ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಅವರು ಕಾರ್ಮಿಕ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯು ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಗುರುತಿಸಿ, ರಕ್ಷಿಸಿ ಅವರಿಗೆ ಪುನರ್ವಸತಿ ಕಲ್ಪಿಸಲು ಮುಂದಾಗಿದೆ. ಇದು ಉತ್ತಮ ಬೆಳವಣಿಗೆಯಾಗಿದೆ. ಸರ್ಕಾರದ ಈ ಯೋಜನೆ ಸದ್ಭಳಕೆಯಾಗಬೇಕು ಎಂದರು.
ಬಾಲಕಾರ್ಮಿಕ ಪದ್ದತಿ ಸಾಮಾಜಿಕ ಪಿಡುಗಾಗಿ ಪರಿಣಮಿಸಿದೆ. ಬಡತನದ ಬಾಧೆ ತಾಳಲಾರದೇ ಬಾಲಕಾರ್ಮಿಕರಾಗುವ ಮಕ್ಕಳು ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊ ಳ್ಳುತ್ತಿದ್ದಾರೆ. ಅಂತಹ ಬಾಲಕಾರ್ಮಿಕರನ್ನು ಗುರುತಿಸಿ, ಮುಕ್ತಿಗೊಳಿಸಿ ತಾತ್ಕಾಲಿಕವಾಗಿ ಅವರ ಜೀವನ ನಿರ್ವಹಣೆಗಾಗಿ ಆಹಾರದ ಕಿಟ್ ನೀಡಲಾಗುತ್ತಿದೆ. ಬಾಲಕಾರ್ಮಿಕv ಯಿಂದ ಮುಕ್ತಗೊಂಡ ಮಕ್ಕಳ ಶಿಕ್ಷಣ ಮುಂದುವರಿಕೆಗೂ ಸಹ ಇಲಾಖೆ ಅವಕಾಶ ಕಲ್ಪಿಸಿದೆ ಎಂದು ನ್ಯಾಯಾಧೀಶರಾದ ಈಶ್ವರ್ ಅವರು ತಿಳಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ. ಎಂ. ಸವಿತ ಅವರು ಮಾತನಾಡಿ ಬಾಲಕಾರ್ಮಿಕರನ್ನು ಗುರುತಿಸಿ ರಕ್ಷಿಸುವುದು ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ಪ್ರಸ್ತುತ ಗುರುತಿಸಲಾಗಿರುವ ಬಾಲ ಕಾರ್ಮಿಕರಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ (ಎಸ್.ಸಿ.ಪಿ, ಟಿಎಸ್.ಪಿ) ಉಪಯೋಜನೆಗಳಡಿ ಪುನರ್ವಸತಿ ಕಲ್ಪಿ ಸಲಾಗುತ್ತಿದೆ. ಬಾಲಕಾರ್ಮಿಕ ಪದ್ದತಿಯಿಂದ ಮುಕ್ತಗೊಳಿಸಿದ ಬಳಿಕ ಮಕ್ಕಳಿಗೆ ತೊಂದರೆಯಾಗದಂತೆ ತಕ್ಷಣವೇ ಅಗತ್ಯ ಆಹಾರದ ಪರಿಕರಗಳನ್ನು ಒದಗಿಸಲಾಗುತ್ತದೆ ಎಂದರು.
ಬಾಲಕಾರ್ಮಿಕ ಮಕ್ಕಳಲ್ಲಿ ಕೀಳಿರಿಮೆ ಹೋಗಲಾಡಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಇಲಾಖೆ ಸತತ ಪ್ರಯತ್ನ ಮಾಡುತ್ತಿದೆ. ಅಂತಹ ಮಕ್ಕಳ ಮುಂದಿನ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಶೈಕ್ಷಣಿಕ ವ್ಯವಸ್ಥೆಯಡಿ ಸರ್ಕಾರಿ ಶಾಲೆ ಹಾಗೂ ಅಗತ್ಯವಿದ್ದರೆ ವಿದ್ಯಾರ್ಥಿನಿಲಯಗಳಲ್ಲಿಯೂ ಅವಕಾಶ ಮಾಡಿಕೊಡಲಾಗುತ್ತದೆ. ಮಕ್ಕಳು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ರೂಪು ಗೊಳ್ಳಲು ಉನ್ನತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಡಾ. ಸವಿತಾ ಅವರು ತಿಳಿಸಿದರು. ಜಿಲ್ಲಾ ಬಾಲ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಮಹೇಶ್ ಅವರು ಇದೇ ವೇಳೆಹಾಜರಿದ್ದರು.