ಬೆಂಗಳೂರು: ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಮತ್ತೋರ್ವ ಬಲಿಯಾಗಿದ್ದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ ನಡೆದಿದ್ದು ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧದಿಂದ ಬೇಸತ್ತು 41 ವರ್ಷದ ಬಾಲರಾಜ್ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಾಲರಾಜ್ 18 ವರ್ಷದ ಹಿಂದೆ ಪತ್ನಿ ಕುಮಾರಿ ಎಂಬುವರನ್ನ ಎರಡನೇ ಮದುವೆಯಾಗಿದ್ದರು. ಆದರೆ ಇಬ್ಬರ ಮಧ್ಯೆ ನಿರಂತರವಾಗಿ ಜಗಳವಾಗುತ್ತಿತ್ತು. ತನ್ನ ಪತ್ನಿ ತನಗೆ ಕಿರುಕುಳ ನೀಡುವುದರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಬಾಲರಾಜ್ ಆರೋಪಿಸಿದ್ದಾರೆ. ಇನ್ನು ಗಲಾಟೆ ನಂತರ ಕುಮಾರಿ ಗಂಡನ ಮನೆ ಬಿಟ್ಟು ತವರು ಮನೆ ಸೇರಿಕೊಂಡಿದ್ದಳು. ಸದ್ಯ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.