ಬೆಂಗಳೂರು: ಹೇಳಿದ್ದನ್ನೇ ಪದೇ ಪದೇ ಹೇಳುವ ಅಗತ್ಯವಿಲ್ಲ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.ಇಂದು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಕಾರಿನಲ್ಲಿ ಹೊರಟಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಕ್ರಿಯೆ ಕೇಳಲು ಮಾಧ್ಯಮದವರು ಮುಂದಾದರು.
ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆಯೇ ಎಂದು ಪ್ರಶ್ನಿಸಿದಾಗ ಸಿಡುಕಿದಂತೆ ಕಂಡ ಖರ್ಗೆಅವರು ಪದೇಪದೆ ಅದೇ ಮಾತನ್ನು ಚರ್ಚಿಸು ವುದರಲ್ಲಿ ಅರ್ಥವಿಲ್ಲ, ನಿನ್ನೆ ಮತ್ತು ಮೊನ್ನೆ ಪಕ್ಷದ ಅಧ್ಯಕ್ಷನಾಗಿ ಹೇಳಿಕೆ ನೀಡಿದ್ದೇನೆ,
ನಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ರಾಜ್ಯಾದಂತ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ ಮತ್ತು ಪತ್ರಿಕಾ ಗೋಷ್ಠಿಗಳನ್ನು ನಡೆಸುತ್ತಿದ್ದಾರೆ, ಎಲ್ಲವನ್ನೂ ಮಾಧ್ಯಮದವರ ಮುಂದೆ ಸ್ಪಷ್ಟಪಡಿಸಲಾಗಿದೆ, ಹಾಗಾಗಿ ಮತ್ತೊಮ್ಮೆ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.