ಬೆಂಗಳೂರು: ವಿಧಾನಪರಿಷತ್ ಕಲಾಪದಲ್ಲಿಂದು ಪ್ರಶ್ನೋತ್ತರ ವೇಳೆಯಲ್ಲಿ ಎಸ್ಸಿಪಿ ಹಾಗೂ ಟಿಎಸ್ಪಿ ಹಣ ದುರ್ಬಳಕೆ ವಿಷಯ ಪ್ರಸ್ತಾಪವಾಗಿ ಗದ್ದಲವುಂಟಾದ ಪ್ರಸಂಗ ನಡೆಯಿತು.ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಅವರು, ವಿಷಯವನ್ನು ಪ್ರಸ್ತಾಪಿಸಿ ಅನುದಾನ ಪದ ಬಳಸುತ್ತಿದ್ದಂತೆ ಗದ್ದಲಕ್ಕೆ ಎಡೆಮಾಡಿಕೊಟ್ಟಿತ್ತು. ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವ ಸರ್ಕಾರವನ್ನು ಪ್ರಶ್ನಿಸಿದ ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಈಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎಸ್ಸಿಪಿ ಹಾಗೂ ಟಿಎಸ್ಪಿ ಅನುದಾನ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟಿರುವುದು. ಅದನ್ನು ನಮಗೆ ಕೊಡಿ. ಈ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದ ಛಲವಾದಿ ನಾರಾಯಣಸ್ವಾಮಿ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಹಾಗೂ ಉಮಾಶ್ರೀ, ಪ್ರಿಯಾಂಕ್ ಖರ್ಗೆ ಛಲವಾದಿ ನಾರಾಯಣಸ್ವಾಮಿ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದಾಗ ಸದನದಲ್ಲಿ ಕೆಲ ಕಾಲ ಗದ್ದಲದ ವಾತಾವರಣ ನಿರ್ಮಾಣವಾದ ಹಿನ್ನಲೆಯಲ್ಲಿ ಸದನಕಲಾಪವನ್ನು 10 ನಿಮಿಷಗಳ ಕಾಲ ಸಭಾಪತಿ ಅವರು ಮುಂದೂಡಿದರು.