ಕೆಜಿಎಫ್: ನಾವು ಮನೆಗಳಲ್ಲಿ ಸಾಕುಪ್ರಾಣಿಗಳನ್ನು ಹೇಗೆ ಪ್ರೀತಿಯಿಂದ ಪೋಷಿಸುತ್ತೇವೆಯೋ, ಅದೇ ರೀತಿ ಗಿಡಮರಗಳನ್ನು ಪೋಷಿಸಿದಾಗ ಮಾತ್ರ ಪರಿಸರ ಉಳಿಸಲು ಸಾಧ್ಯ ಕೇವಲ ಪರಿಸರ ಪ್ರೇಮಿಗಳಾದರೆ ಸಾಲದು, ಪರಿಸರ ಆರಾಧಕರಾಗಬೇಕು ಎಂದು ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಕುಮಾರ್ ಅವರು ಅಭಿಪ್ರಾಯಪಟ್ಟರು
ಗ್ರಾಮದ ಸಮೀಪದ ಟಿ.ಗೊಲ್ಲಹಳ್ಳಿ ಗ್ರಾಮದ ಹೊರ ವಲಯದ ಕೆರೆಯ ಅಂಗಳದಲ್ಲಿ ಬೆಳಕು ಟ್ರಸ್ಟ್ ಹಾಗೂ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರುದುಂದುವೆಚ್ಚಕ್ಕೆ ಕಡಿವಾಣ – ಗಿಡ ವಿತರಣೆಗೆ ಆದ್ಯತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಣವನ್ನು ದುಂದುವೆಚ್ಚ ಮಾಡುವ ಬದಲು, ನೆನಪಿನ ಸಂಕೇತವಾಗಿ ಗಿಡಗಳನ್ನು ವಿತರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಅವರು ಕರೆ ನೀಡಿದರು ಹುಟ್ಟುಹಬ್ಬದ ಸಾರ್ಥಕ ಆಚರಣೆ ಇದೇ ಸಂದರ್ಭದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಯಲಕ್ಷಿ÷್ಮ ಅವರು ತಮ್ಮ ಪುತ್ರನ ಹುಟ್ಟುಹಬ್ಬದ ಅಂಗವಾಗಿ ಕೆರೆ ಅಂಗಳದಲ್ಲಿ ಸಸಿ ನಾಟಿ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾದರು. ಪ್ರತಿಯೊಬ್ಬರೂ ತಮ್ಮ ಮನೆಯ ಶುಭ ಸಮಾರಂಭಗಳಲ್ಲಿ ಗಿಡ ನೆಡುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು ಬೆಳಕು ಟ್ರಸ್ಟ್ ಕಾರ್ಯಕ್ಕೆ ಶ್ಲಾಘನೆ ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮುಜಾಫರ್ ಮಂಜೂರಿ ಮಾತನಾಡಿ, ಬೆಳಕು ಟ್ರಸ್ಟ್ ಪದಾಧಿಕಾರಿಗಳು ಸಮಾಜದ ಬಗ್ಗೆ ಕಾಳಜಿ ಇಟ್ಟುಕೊಂಡು ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಇವರ ಸೇವೆ ಹೀಗೆಯೇ ಮುಂದುವರಿಯಲಿ ಎಂದು ಹಾರೈಸಿದರು
ಈ ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಶೆಮಿದ, ವಕೀಲರ ಸಂಘದ ಅಧ್ಯಕ್ಷರಾದ ರಾಜಗೋಪಾಲ್ ಗೌಡ, ಬೇತಮಂಗಲ ವೃತ್ತ ನಿರೀಕ್ಷಕ ರಂಗಶಾಮಯ್ಯ, ಕನ್ನಡ ಸಾಹಿತ್ಯ ಪರಿಷತ್ ನಿಕಟ ಪೂರ್ವ ಅಧ್ಯಕ್ಷ ನಾಗರಾಜ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಮೂರ್ತಿ, ಬೆಳಕು ಟ್ರಸ್ಟ್ ಅಧ್ಯಕ್ಷರಾದ ರಾಧಾಮಣಿ, ಸ್ಕೌಟ್ಸ್ ಮತ್ತು ಗೈಡ್ಸ್ ಬಾಬು, ಪಾರ್ಥ, ಲೋಕೇಶ್ ಆನಂದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪರಿಸರ ಆರಾಧಕರಾದಾಗ ಮಾತ್ರ ಪ್ರಕೃತಿ ರಕ್ಷಣೆ ಸಾಧ್ಯ: ನ್ಯಾಯಾಧೀಶ ಶಿವಕುಮಾರ್



