ನೆಲಮಂಗಲ: ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ಸಂಚಾರಿ ಅರಣ್ಯಾಧಿಕಾರಿಗಳ ವಿಶೇಷ ಕಾರ್ಯಚರಣೆ ಮಾಡಿ ನೆಲಮಂಗಲದ ಶಾರ್ಪ್ ಶೂಟರ್ ಶ್ರೀನಿವಾಸ್(46), ಹನುಮಂತರಾಜು (44), ಮತ್ತು ರಾಮನಗರದ ಮುನಿರಾಜು(38) ಬಂಧಿತರು.
ಅರಣ್ಯಾಧಿಕಾರಿಗಳನ್ನು ಕಂಡು ಥಾರ್ ಜೀಪ್ನಲ್ಲಿ ಆರೋಪಿಗಳು ಪರಾರಿಯಾಗುತ್ತಿದ್ದರು. 6 ಕಿ. ಮೀ ಸಿನಿಮಾ ಶೈಲಿಯಲ್ಲಿ ಚೇಸಿಂಗ್ ಮಾಡಿ ಆರೋಪಿಗಳನ್ನು ರಾಮನಗರ ಜಿಲ್ಲೆಯ ಚಿಕ್ಕಕುಂಟನಹಳ್ಳಿ ಕ್ರಾಸ್ ಬಳಿ ಬಂಧಿಸಲಾಗಿದೆ.
ಸದ್ಯ ಬಂಧಿತರಿಂದ 2 ಜಿಂಕೆ, 2 ಕಾಡು ಹಂದಿ, 1 ಗನ್, ಏರ್ ಗನ್, 11 ಜೀವಂತ ಗುಂಡು, 2 ಚಾಕು, ಕೊಡಲಿ, ಮಚ್ಚು, 3 ಮೊಬೈಲ್ ಜಪ್ತಿ ಮಾಡಲಾಗಿದೆ. ಹೈ ಫ್ಲ್ಯಾಶ್ ಲೈಟ್ಗಳನ್ನ ಬಳಸಿ ಆರೋಪಿಗಳು ಬೇಟೆಯಾಡುತ್ತಿದ್ದರು. ಎರಡು ತಿಂಗಳ ಸತತ ಪ್ರಯತ್ನದಿಂದ ಆರೋಪಿಗಳು ಬಲೆಗೆ ಬಿದಿದ್ದಾರೆ.
ಬೆಂಗಳೂರು ಅರಣ್ಯ ಸಂಚಾರಿ ದಳದ ಡಿಸಿಎಫ್ ಸುನಿತಾ ಬಾಯಿ, ಎಸಿಎಫ್ ಸರಿತಾ ಮಾರ್ಗದರ್ಶನ, ಆರ್ಎಫ್ಒ ರಮೇಶ್, ಸಿದ್ದರಾಜು, ಅಮೃತ್ ದೇಸಾಯಿ, ರಾಜು, ಆಶಾ, ಚೇಸಿಂಗ್ ಮಾಡಿದ ಚಾಲಕ ಸುರೇಶ್ ನೇತೃತ್ವದ ತಂಡದ ವಿಶೇಷ ಕಾರ್ಯಚರಣೆ ಮೂಲಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.