ಬೆಂಗಳೂರು: ಬಿಎಂಟಿಸಿ ಬಸ್ ನ ಮುಂಭಾಗದ ಬಾಗಿಲಲ್ಲಿ ನಿಂತು ಪ್ರಯಾಣಿಸುತ್ತಿದ್ದ ಪ್ರಯಾಣಿಕನ್ನೊಬ್ಬ ಆಯಾ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ತುಳಸಿ ಭಂಡಾರಿ (೨೫) ಯುವಕ ನಿನ್ನೆ ಬಿಎಂಟಿಸಿ ಬಸ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಬಸ್ ಚಲಿಸುವಾಗ ಬಸ್ನ ಮುಂಭಾಗದ ಬಾಗಿಲಲ್ಲಿ ನಿಂತು ಪ್ರಯಾಣಿಸುತ್ತಿದ್ದ ವೇಳೆ ಆಯಾ ತಪ್ಪಿ ಮೃತಪಟ್ಟಿದ್ದು, ನೆಲಮಂಗಲ ಸಂಚಾರಿ ಪೊಲೀಸರು ದೂರು ದಾಖಲಿಸಿಕೊಂಡಿರುತ್ತಾರೆ.
ವಿಶ್ವನಾಥಪುರ ಪೊಲೀಸ್ ಠಾಣ ವ್ಯಾಪ್ತಿಯ ಕಾರಹಳ್ಳಿ ಕ್ರಾಸ್ ಬಳಿ ಎರಡು ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿಯಾಗಿ ಶ್ರೀನಿವಾಸ್ ಎಂಬ ವ್ಯಕ್ತಿಯು ಮೃತಪಟ್ಟಿರುತ್ತಾನೆ.ಈ ಇಬ್ಬರು ಪರಸ್ಪರ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದುಕೊಂಡು ಮೃತಪಟ್ಟಿರುತ್ತಾರೆ ಎಂದು ವಿಶ್ವನಾಥಪುರ ಪೊಲೀಸರು ತಿಳಿಸಿರುತ್ತಾರೆ.