ಬೆಂಗಳೂರು: ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಲೂರು ರಸ್ತೆಯ ಹಲಗೂರು ಗೇಟ್ ಬಳಿ ಈಚರ್ ಗಾಡಿ ಮೋಟರ್ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುತ್ತಾರೆ.
ವಿಜಯ್ ಕುಮಾರ್ 30 ವರ್ಷದ ವ್ಯಕ್ತಿ ಕೆಲಸ ಮುಗಿಸಿ ಮನೆಗೆ ತೆರಳುವ ಸಮಯದಲ್ಲಿ ಈಚರ್ ಗಾಡಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿರುತ್ತದೆ.
ಮತ್ತೊಂದು ಪ್ರಕರಣದಲ್ಲಿ ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ವಾಹನ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾರಾಯಣಸ್ವಾಮಿ(48) ಎಂಬ ವ್ಯಕ್ತಿ ಮೃತಪಟ್ಟಿರುತ್ತಾರೆ. 48 ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ದೊಡ್ಡೇರಿ ತಿರುವಿನಲ್ಲಿ ಈ ಅಪಘಾತ ಸಂಭವಿಸಿರುತ್ತದೆ.