ಬೆಂಗಳೂರು: ವಿಶ್ವವಿದ್ಯಾಲಯದ ಕಾನೂನು ಪದವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ಪತ್ತೆ ಸೈಬರ್ ಕ್ರೈಂ ಪೊಲಿಸರು ಜಗದೀಶ್ 35, ವರುಣ್ ಕುಮಾರ್ 20, ನಾಗರಾಜ್ 47, ರವರುಗಳನ್ನು ಬಂಧಿಸಿರುತ್ತಾರೆ.ನಗರ ಪೊಲೀಸ್ ಆಯುಕ್ತ ದಯಾನಂದ್ ರವರು ಸುದ್ದಿಗೋಷ್ಠಿಯಲ್ಲಿ ಜನವರಿ 23ರಂದು ನಿಗದಿಯಾಗಿದ್ದ ಪ್ರಶ್ನೆ ಪತ್ರಿಕೆಯ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಾದ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಲ್ಲಿ ಹರಿಬಿಟ್ಟು ವಿದ್ಯಾರ್ಥಿಗಳ ಹಿತಾಸಕ್ತಿಗೆ ಉಂಟು ಮಾಡುತ್ತಿದ್ದ ಮೂರು ಜನ ಆರೋಪಿಗಳನ್ನು ಬಂಧಿಸಿರುತ್ತಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಎಸ್ ಜೆ ಎಂ ಕಾನೂನು ಮಹಾವಿದ್ಯಾಲಯ ಹಾಗೂ ಚೇರ್ಮನ್ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಗಳ ಜಾಗೃತ ದಳ 2 ಅಧಿಕಾರಿ ಯವರು ನೀಡಿದ ದೂರಿನ ಮೇರೆಗೆ ಬಂಧಿಸಿರುತ್ತಾರೆ.ಸೈಬರ್ ಕ್ರೈಂ ಪೊಲೀಸರು ಮಾಹಿತಿ ಮತ್ತು ತಾಂತ್ರಿಕ ಸಹಾಯದಿಂದ ಮಾಹಿತಿಗಳನ್ನು ಸಂಗ್ರಹಿಸಿ ಟೆಲಿಗ್ರಾಂ ಗ್ರೂಪ್ ಮೂಲಕ ಎಲ್ಎಲ್ ಬಿ ಪರೀಕ್ಷೆಯ ಕಾಂಟ್ರಾಕ್ಟ್ ಲಾ ಒಂದು ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳನ್ನು ಪರೀಕ್ಷಾರ್ಥಗಳಿಗೆ ಸೋರಿಕೆ ಮಾಡಿದ್ದ ವ್ಯಕ್ತಿಗಳನ್ನು ಬಂಧಿಸಿರುತ್ತಾರೆ. ಮತ್ತು ಬೆಂಗಳೂರು ನಗರದ ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಸುಳ್ಳು ದೂರು ದಾಖಲಿಸಿದ್ದ ಆರು ಪ್ರಕರಣಗಳಲ್ಲಿ ಸುಳ್ಳು ದೂರು ನೀಡಿದವರ ವಿರುದ್ಧ ಪ್ರಕರಣಗಳನ್ನು ಅಮೃತಳ್ಳಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು. ಈ ಸಂಬಂಧ ನಾಲ್ಕು ಪ್ರಕರಣಗಳಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.
ಎರಡು ಪ್ರಕರಣಗಳಲ್ಲಿ ವಿಚಾರಣೆ ಪೂರ್ಣಗೊಳಿಸಿ ಶಿಕ್ಷೆ ಗೊಳಿಸಲಾಗಿದೆ ಉಳಿದ ಎರಡು ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.ಅಮೃತಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಆರೋಪಿಯು ನ್ಯಾಯಾಲಯದಲ್ಲಿ ತಪ್ಪೋಪ್ಪಿಕೊಂಡ ಕಾರಣ 13 ಮಾರ್ಚ್ 24ರಂದು ನ್ಯಾಯಾಲಯವು ಆರೋಪಿಗೆ 100 ರೂಪಾಯಿ ದಂಡ ವಿಧಿಸಿ ದಂಡ ಕಟ್ಟಲು ತಪ್ಪಿದಲ್ಲಿ ಐದು ದಿನ ಸಾದಾ ಶಿಕ್ಷೆ ಘೋಷಿಸಲಾಗಿದೆ ಎಂದು ತಿಳಿಸಿದರು.ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಆರೋಪಿಯು ನ್ಯಾಯಾಲಯದಲ್ಲಿ ತಪ್ಪು ಒಪ್ಪಿಕೊಂಡ ಕಾರಣ ನ್ಯಾಯಾಲಯವು 500 ರೂಪಾಯಿ ದಂಡ ವಿಧಿಸಿ ದಂಡ ಕಟ್ಟಲು ತಪ್ಪಿದ್ದಲ್ಲಿ ಐದು ದಿನ ಸಾದಾ ಶಿಕ್ಷೆ ವಿಧಿಸಲಾಗಿದೆ ಎಂದು ಘೋಷಿಸಿದೆ ಎಂದು ಆಯುಕ್ತರು ಸುದ್ದಿಗೋಷ್ಠಿಯಲ್ಲಿ ವಿವರಿಸಿದ್ದರು.