ಬೆಂಗಳೂರು: ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಯಿ, ಬೆಕ್ಕಿನ ಜೀವಕ್ಕೆ ಹಾನಿಯಾದಾಗ ಪ್ರಾಣಿದಯಾ ಸಂಘದವರು ಬೊಬ್ಬೆ ಹೊಡೆದುಕೊಂಡು ಬರುತ್ತಾರೆ. ಆದರೆ ನಾವು ಪೂಜಿಸುವ, ಅದರ ಹಾಲನ್ನು ಕುಡಿಯುವ ಗೋಮಾತೆಗೆ ತೊಂದರೆಯಾದಾಗ ಯಾಕೆ ಮಾತನಾಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಹಸುಗಳ ಮೇಲೆ ನಡೆದಂತ ಕೌರ್ಯ, ನಾಳೆ ಮನುಷ್ಯರ ಮೇಲೂ ನಡೆಯಬಹುದು. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾವು ಗೋವುಗಳನ್ನು ಹಸು ಅಂತ ನೋಡಲ್ಲ ಮಾತೆ ಎಂದು ಪೂಜಿಸುತ್ತೇವೆ. ಕುಡಿದ ಮತ್ತಿನಲ್ಲಿ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಬೇಕೆಂದೇ ಉದ್ದೇಶಪೂರ್ವಕವಾಗಿ ಮಾಡಿರುವಂತ ವಿಕೃತಿ ಕೆಲಸ. ಆರೋಪಿ ವಿರುದ್ಧ BNS ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರ ಜೊತೆಗೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿರುವ ಪ್ರಕರಣವನ್ನು ದಾಖಲಿಸಬೇಕು ಎಂದು ಚೈತ್ರಾ ಹೇಳಿದ್ದಾರೆ.
ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್ ಪೇಟೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಶೇಕ್ ನಸ್ರು (30) ಎಂದು ಗುರ್ತಿಸಲಾಗಿದೆ. ಈತ ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾಗಿದ್ದು, ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲೆಯುವ ಅಂಗಡಿಯಲ್ಲಿ ಸಹಾಯಕನಾಗಿ ಈತ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.