ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಅವರೀಗ ಕಾನೂನಿನ ಕುಣಿಕೆಯಲ್ಲಿ ಸಿಲುಕಿದ್ದಾರೆ. 3 ಲಕ್ಷ ಅಮೆರಿಕನ್ ಡಾಲರ್ ಗೂ ಅಧಿಕ ಮೊತ್ತದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಾಂಗ್ಲಾದೇಶದ ಕೋರ್ಟ್ ಒಂದು ಅವರಿಗೆ ಇದೀಗ ವಾರಂಟ್ ಜಾರಿಗೊಳಿಸಿದೆ.
ಈ ಬಗ್ಗೆ ಐಎಫ್ಐಸಿ ಬ್ಯಾಂಕಿನ ವಕ್ತಾರ ಮೊಹಮ್ಮದ್ ಶಹೀಬುರ್ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಭಾನುವಾರ ಕೋರ್ಟ್ ವಾರಂಟ್ ಜಾರಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ. ಹೀಗಾಗಿ ಯಾವ ಕ್ಷಣದಲ್ಲಿ ಬೇಕಾದರೂ ಶಕಿಬ್ ಅಲ್ ಹಸನ್ ಅವರ ಬಂಧನ ಆಗುವ ಸಾಧ್ಯತೆ ಇದೆ.
ಮುಂದಿನ ತಿಂಗಳು ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ ಟ್ರೋಫಿಯಲ್ಲಿ ಭಾಗವಹಿಸಲಿರುವ ಬಾಂಗ್ಲಾದೇಶದ ತಂಡಕ್ಕೆ ಅವರು ಆಯ್ಕೆಯಾಗಿಲ್ಲ. ಪ್ರಸ್ತುತ ರಾಷ್ಟ್ರೀಯ ತಂಡದಿಂದ ಹೊರಬಿದ್ದಿರುವ ಶಕೀಬ್ ಕೆನಡಾದಲ್ಲಿ ದೇಶೀಯ ಟ್ವೆಂಟಿ 20 ಕ್ರಿಕೆಟ್ ಸ್ಪರ್ಧೆಯಲ್ಲಿ ಆಡುತ್ತಿದ್ದಾರೆ. ಹೀಗಾಗಿ ಬಾಂಗ್ಲಾದೇಶಕ್ಕೆ ವಾಪಸ್ ಆದೊಡನೆ ಬಂಧನವಾಗುವ ಸಾಧ್ಯತೆ ಇದೆ.