ಸ್ಯಾಂಡಲ್ವುಡ್ ಮಾತ್ರವಲ್ಲದೆ, ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಹೆಸರು ಮಾಡಿರುವ ಚಿತ್ರನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್. ಇದೀಗ ಇದೇ ಹೊಂಬಾಳೆ ಬತ್ತಳಿಕೆಯ ಮತ್ತೊಂದು ಹೊಸ ಸಿನಿಮಾ ಬಘೀರ. ಈ ಸಿನಿಮಾ ಇನ್ನೇನು ಇದೇ ಮಾಸಾಂತ್ಯಕ್ಕೆ ತೆರೆಗೆ ಬರಲಿದೆ.
ಅದಕ್ಕೂ ಮೊದಲು ಈ ಚಿತ್ರದ ಮೊದಲ ಹಾಡು ಬಿಡುಗಡೆ ಆಗಲಿದೆ. ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕನಾಗಿ ನಟಿಸಿರುವ ಬಘೀರ ಚಿತ್ರ ಈಗಾಗಲೇ ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿದೆ. ಈ ಚಿತ್ರಕ್ಕೆ ಕೆಜಿಎಫ್ ಮತ್ತು ಸಲಾರ್ ಸಿನಿಮಾ ನಿರ್ದೇಶಕ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ ಎಂಬುದು ಇನ್ನೊಂದು ಬಲ. ಆಕ್ಷನ್ ಟೀಸರ್ ಮೂಲಕವೇ ನಿರೀಕ್ಷೆ ಮೂಡಿಸಿರುವ ಈ ಸಿನಿಮಾದ ಮೊದಲ ಹಾಡು ರುಧೀರ ಧಾರಾ ಸಾಂಗ್ ಅಕ್ಟೋಬರ್ 17ರಂದು ಬಿಡುಗಡೆ ಆಗಲಿದೆ. ಈ ಮೂಲಕ ಸಿನಿಮಾ ಪ್ರಚಾರಕ್ಕೆ ಧುಮುಕಲಿದೆ. ಸಾಲು ಸಾಲು ಸರ್ಪ್ರೈಸ್ಗಳು ಸಿನಿಮಾಪ್ರಿಯರಿಗೆ ಸಿಗಲಿದೆ.