ಬಳ್ಳಾರಿ: ಐವರು ಬಾಣಂತಿಯರ ಸಾವು ಪ್ರಕರಣದ ಬೆನ್ನಲ್ಲೇ ಬಳ್ಳಾರಿ ಜಿಲ್ಲಾಸ್ಪತ್ರೆಗೆ (ಬಿಮ್ಸ್) ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿದ್ದಾರೆ. ಸುಮಾರು 25 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಗಳ ತಂಡ ಬಿಮ್ಸ್ ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್.ಪಿ ಸಿದ್ದರಾಜು ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.
ಲೋಕಾಯುಕ್ತಅಧಿಕಾರಿಗಳು ಬಳ್ಳಾರಿ ಜಿಲ್ಲಾಸ್ಪತ್ರೆಯ ಔಷಧ ವಿಭಾಗದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಐವಿ ಹಾಗೂ ಆರ್ಎಲ್ ಪ್ಲೂಯಿಡ್ ಔಷಧಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹಾಗೇ ಬಾಣಂತಿಯರ ಅಸ್ವಸ್ಥರಾಗಲು ಕಾರಣವೇನು ಎಂಬುವುದರ ಬಗ್ಗೆ ನಾಲ್ವರು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.
ಮೂರು ತಂಡಗಳಾಗಿ ಲೋಕಾಯುಕ್ತಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.