ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘವು ಜಂಟಿಯಾಗಿ ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಶೇಕಡ 25%ಬಾಕಿ ಬಿಲ್ ಬಿಡುಗಡೆಗಾಗಿ ಒತ್ತಾಯಿಸಿ ಕಾಮಗಾರಿ ಸ್ಥಗಿತಗೊಳಿಸಿ ಫೀಡಂಪಾರ್ಕ್ ನಲ್ಲಿ ಸಾವಿರಾರು ಗುತ್ತಿಗೆದಾರರು ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ನಂದಕುಮಾರ್ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿದಾರರ ಸಂಘದ ಅಧ್ಯಕ್ಷರಾದ ಕೆ.ಟಿ.ಮಂಜುನಾಥ್ ರವರ ನೇತೃತ್ವದಲ್ಲಿ ನೂರಾರು ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷರಾದ ಮಂಜುನಾಥ್ ಮತ್ತು ಪದಾಧಿಕಾರಿಗಳು ಹೋರಾಟಕ್ಕೆ ಬೆಂಬಲ ನೀಡಿದರು.
ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಜಿ.ಎಂ.ನಂದಕುಮಾರ್ ರವರು ಬಿಬಿಎಂಪಿ ಮುಖ್ಯ ಆಯುಕ್ತರು ಕೂಡಲೆ ಶೇಕಡ 25ರಷ್ಟು ಹಣ ಬಿಡುಗಡೆ ಮಾಡಬೇಕು.ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಾಗುತ್ತಿದೆ.ನಮ್ಮ ಹೋರಾಟಕ್ಕೆ ರಾಜ್ಯ ಗುತ್ತಿಗೆದಾರರ ಸಂಘವು, ಎಲ್ಲ ಜಿಲ್ಲೆಯ ಗುತ್ತಿದಾರರು ಬೆಂಬಲ ನೀಡುತ್ತಿದ್ದಾರೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಮತ್ತು ಉಪಮುಖ್ಯಮಂತ್ರಿಗಳು ನಗರಾಭಿವೃದ್ದಿ ಸಚಿವರಾದ ಡಿ.ಕೆ.ಶಿವಕುಮಾರ್ ರವರ ನಮ್ಮ ಸಮಸ್ಯೆ ಬಗೆಹರರಿಸಬೇಕು.ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘ ಅಧ್ಯಕ್ಷ ಕೆ.ಟಿ.ಮಂಜುನಾಥ್ ರವರು ಮಾತನಾಡಿ ಒಬ್ಬ ಗುತ್ತಿಗೆದಾರರ ನಂಬಿಕೊಂಡು ನೂರಾರು ಕುಟುಂಬಗಳು ಇರುತ್ತದೆ. ಕಲ್ಲು ,ಜಲ್ಲಿ ಮರಳು ಮಾರಾಟ ಮಾಡುವವರು ಹಾಗೂ ಕಟ್ಟಡ ಮತ್ತು ರಸ್ತೆ ಚರಂಡಿ ಮತ್ತು ಒಳಚಂರಡಿ ನಿರ್ಮಾಣ ಮಾಡುವ ಕಾರ್ಮಿಕರು ಕಾರ್ಯನಿರ್ವಹಿಸುತ್ತಾರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾವಿರಾರು ಗುತ್ತಿಗೆದಾರರು ಕಾರ್ಯನಿರ್ವಹಿಸುತ್ತಿದ್ದಾರೆ.
ಕಾಮಗಾರಿ ಬಿಲ್ ಪಾವತಿ ತಡವಾಗುವುದರಿಂದ ಬ್ಯಾಂಕ್ ನಿಂದ ಸಾಲದ ಮೇಲಿನ ಬಡ್ಡಿ ದರ ಹೆಚ್ಚಾಗುತ್ತದೆ ಮತ್ತು ಹಾಗೂ ಕಾಮಗಾರಿ ಬಿಲ್ ಸಂಪೂರ್ಣ ಪಾವತಿಯಾಗಿಲ್ಲವೆಂದರೆ ಗುತ್ತಿಗೆದಾರ ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾನೆ.ಗುತ್ತಿಗೆದಾರರ ಉಳಿಯಬೇಕ ಎಂದರೆ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕೊಡಲೆ ಶೇಕಡ 25ರಷ್ಟು ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.