ಬಳ್ಳಾರಿ: ಬಳ್ಳಾರಿ ಸರ್ಕಾರಿ ಜಿಲ್ಲಾ ಆಸ್ಪತ್ರೆ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯರು ಮೃತಪಟ್ಟ ಘಟನೆ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ನವೆಂಬರ್ 9 ರಂದು ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಏಳು ಮಂದಿ ಗರ್ಭಣಿಯರಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರಲ್ಲಿ ಇಲಿ ಜ್ವರ ಪತ್ತೆಯಾಗಿದೆ.
ಸದ್ಯ ಆಸ್ಪತ್ರೆಯಿಂದ ಇಬ್ಬರು ಡಿಸ್ಚಾರ್ಜ್ ಆಗಿದ್ದು, ಓರ್ವ ಬಾಣಂತಿಗೆ ಚಿಕಿತ್ಸೆ ಮುಂದುವರೆದಿದೆ. ಎಂದು ಬಿಮ್ಸ್ ನಿರ್ದೇಶಕ ಡಾ.ಗಂಗಾಧರ್ ಗೌಡ ಮಾಹಿತಿ ನೀಡಿದ್ದಾರೆ.ಬಳ್ಳಾರಿಯ ಸರ್ಕಾರಿ ಆಸ್ಪತ್ರೆಗೆ ಏಳು ಮಂದಿ ಗರ್ಭಿಣಿಯರು ದಾಖಲಾಗಿದ್ದರು. ಏಳೂ ಮಂದಿ ಗರ್ಭಣಿಯರಿಗೆ ನವೆಂಬರ್ 9 ರಂದು ಸಿಸೇರಿಯನ್ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗುತ್ತಿತ್ತು. ಆರೋಗ್ಯದಲ್ಲಿನ ಏರುಪೇರಿಂದ ನಾಲ್ವರು ಬಾಣಂತಿಯರು ಮೃತಪಟ್ಟಿದ್ದಾರೆ.
ಇನ್ನುಳಿದ ಮೂವರಲ್ಲಿ ಇಲಿ ಜ್ವರ ಪತ್ತೆಯಾಗಿದೆ. ಇಲಿ ಜ್ವರದಿಂದ ಇಬ್ಬರು ಗುಣಮುಖರಾಗಿದ್ದು, ಒಬ್ಬರಿಗೆ ಚಿಕಿತ್ಸೆ ಮುಂದೆವರೆದಿದೆ.ಇದರ ನಡುವೆ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಣಂತಿಯರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆಯಲಿದ್ದಾರೆ.