ದೇವನಹಳ್ಳಿ: 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ 4 ವರ್ಷದ ಅವಾಜ್ ಬಾಷಾ ಎಂಬ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು ಬಾಲಕನ ಮುಖಕ್ಕೆ ಗಾಯಗಳಾಗಿವೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನಿನ್ನೆ ಸಂಜೆ ಮಕ್ಕಳ ಜೊತೆ ಅಂಗಡಿಗೆ ಹೋಗುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಬೀದಿನಾಯಿಗಳು ಮಗುವನ್ನು ಕಚ್ಚಿ ಘಾಸಿಗೊಳಿಸಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಮಗು ಪಾರಾಗಿದೆ. ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.