ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಬಿಜೆಪಿ ಧೂಳಿಪಟ | ಕೇಂದ್ರ ಮಂತ್ರಿಗೆ ಮುಖಭಂಗಢ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ನತ್ತ ದಾಪುಗಾಲಿರಿಸಿದೆ.
ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ, ಶಿಗಾಂವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಆರಂಭಿಕ ಹಿನ್ನಡೆ ಅನುಭವಿಸಿದ್ದ ಕಾಂಗ್ರೆಸ್ ಪಕ್ಷ ಕೊನೆಯ ಹಂತದಲ್ಲಿ ಮುನ್ನಡೆ ಗಿಟ್ಟಿಸುವ ಮೂಲಕ ಗೆಲುವಿನತ್ತ ಹೆಜ್ಜೆ ಹಾಕಿದೆ. ಇದರಿಂದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ ಉಂಟಾಗಿದೆ.ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ, ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಬಾಕಿಯಿದೆ. ಚನ್ನಪಟ್ಟಣದಲ್ಲಿ ಈಗಾಗಲೇ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವಕ್ಕೆ ಸಿದ್ಧತೆ ನಡೆಸುತ್ತಿದೆ.
ಶಿಗ್ಗಾಂವಿ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿಗೆ ತೀವ್ರ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಭರ್ಜರಿ ಗೆಲುವು ಪಡೆದುಕೊಂಡಿದ್ದಾರೆ. ಯಾಸೀರ್ ಪಠಾಣ್ 83,400 ಮತಗಳನ್ನು ಪಡೆದುಕೊಂಡಿದ್ದು, 13 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭಾರಿ ಗೆಲುವು ಸಾಧಿಸಿದ್ದಾರೆ ಯಾಸೀರ್ ಪಠಾಣ್ ಗೆಲುವು ಖಚಿತವಾಗಿದ್ದು ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.