ಬೆಂಗಳೂರು: ನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಂಸದರು, ಶಾಸಕರು ಮತ್ತು ಮುಖಂಡರ ಸಭೆ ಆಯೋಜಿಸಲಾಗಿದೆ. ಸಭೆಯನ್ನು ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ನೇತೃತ್ವದಲ್ಲಿ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆಯಾದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೀಡ್ ತೆಗೆದುಕೊಂಡಿದ್ದಾರೆ. ಇಲ್ಲಿ ಹೇಳಬಯಸುವ ವಿಷಯವೇನೆಂದರೆ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದವರೆಂದು ಗುರುತಿಸಿಕೊಂಡಿರುವ ಪ್ರತಾಪ್ ಸಿಂಹ, ಬಿಪಿ ಹರೀಶ್, ಚಂದ್ರಪ್ಪ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡರು. ಆದರೆ ಯತ್ನಾಳ್ ಮಾತ್ರ ಎಲ್ಲೂ ಕಾಣಲಿಲ್ಲ. ಎರಡನೇ ಹಂತದ ವಕ್ಫ್ ಹೋರಾಟದ ಮಾಹಿತಿಯನ್ನು ದೆಹಲಿಗೆ ತೆರಳಿ ಜೆಪಿಸಿಯ ಅಧಿಕಾರಿಗಳೊಂದಿಗೆ ಹಂಚಿಕೊಂಡಿರುವ ಪ್ರತಾಪ್ ಇವತ್ತು ಬಿಜೆಪಿ ಸಭೆಗೆ ಹಾಜರಾದರು.