ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಉಪಚುನಾವಣೆ ಸಂಬAಧ ಬಿಜೆಪಿಯಿಂದ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿ ಪ್ರಕಟಣೆಯಾಗಿದೆ.
ಕೇಂದ್ರ ಚುನಾವಣೆ ಆಯೋಗಕ್ಕೆ ಪ್ರಚಾರಕರ ಪಟ್ಟಿಯನ್ನು ರಾಷ್ಟಿçÃಯ ಬಿಜೆಪಿ ಕಾರ್ಯದರ್ಶಿಯಾಗಿರುವ ಅರುಣ್ ಸಿಂಗ್ ಕಳುಹಿಸಿಕೊಟ್ಟಿದ್ದಾರೆ.
೪೦ ಜನ ನಾಯಕರಿಗೆ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದ್ದು, ಈ ಪಟ್ಟಿಯಲ್ಲಿ ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ವಿರುದ್ಧ ಅಸಮಾಧಾನ ಹೊರ ಹಾಕುತ್ತಿರುವ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿಗೆ ಸ್ಥಾನ ನೀಡಿಲ್ಲ ಎಂದು ಹೇಳಲಾಗಿದೆ.
ಅರವಿಂದ ಲಿಂಬಾವಳಿ, ಮಾಜಿ ಸಂಸದ ಜಿ ಎಂ ಸಿದ್ದೇಶ್ವರ ಹೆಸರಿಗೂ ಕೊಕ್ ನೀಡಿರುವುದಾಗಿ ತಿಳಿದುಬಂದಿದೆ.