ದೇವನಹಳ್ಳಿ: ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ರವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಸದನದಲ್ಲಿ ಉತ್ತರವನ್ನು ನೀಡಿದರು.ಬಿಪಿಎಲ್ ಪಡಿತರ ಚೀಟಿ ಪಡೆಯಲು ಇರುವ ಮಾನದಂಡಗಳೇನು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾನದಂಡದಡಿ ಬಿಪಿಎಲ್ ಪಡಿತರ ಚೀಟಿ ರದ್ದು ಪಡಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಬಗ್ಗೆ 2017 ರಲ್ಲಿ ಹೊರಗಿಡುವ ಮಾನದಂಡಗಳನ್ನು ರೂಪಿಸಿದೆ.ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಮಂಡಳಿಗಳು /ನಿಗಮಗಳು/ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ/ಸೇವಾ ತೆರಿಗೆ/ ಜಿಎಸ್ಟಿ/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.
ಗ್ರಾಮೀಣ ಪ್ರದೇಶಗಳಲ್ಲಿ 03 ಹೆಕ್ಟರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
ಜೀವನೋಪಾಯಕ್ಕಾಗಿ ಸ್ವತಃ ಒಂದು ಒಡಿಸುವ ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು. ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು.
ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾವುದೇ ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿಗಳನ್ನು ರದ್ದುಆರೋಗ್ಯಕ್ಕೆ ಸಂಭಂದಿಸಿದ ಕಾರ್ಡ್ ಅನ್ನು ಆಯಾ ಜಿಲ್ಲೆಯಲ್ಲಿ ಸಂಭಂದಿಸಿದ ಅಧಿಕಾರಿಗಳು ನೀಡುತ್ತಾರೆ.
ಯಾವುದೇ ಅನಗತ್ಯ ಗೊಂದಲ ಬೇಡ ನಾವು ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ಕಾರ್ಡ್ಗಳನ್ನು ಪರಿಷ್ಕರಣೆ ಮಾಡಿದಾಗ ಕೆಲವು ಗೊಂದಲ
ಗಳಿಂದ ಏರು ಪೇರಾಯಿತು ಅದನ್ನು ತಕ್ಷಣ ರೀ ಸ್ಟೋರ್ಮಾಡಲಾಗಿದ್ದು ಯಾವುದೇ ಅರ್ಹರಿಗೆ ಗೊಂದಲವಾಗದಂತೆ ಕಾರ್ಡ್ ಗಳನ್ನು ವಿತರಿಸಲು ಅಧಿಕಾರಿಗಳಿಗೆ ವಿತರಿಸಲು ಸೂಚನೆ ನೀಡಿದ್ದೇನೆ ಎಂದರು.ಸರ್ಕಾರವು ಅನರ್ಹರನ್ನು ಹೊರಗಿಡುವ ಮಾನದಂಡಗಳನ್ವಯ ಯಾವುದೇ ಅರ್ಹ ಬಡ ಕುಟುಂಬಗಳ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿರುವುದಿಲ್ಲ ಎಂದರು.
ಪೋಷಕರ ಆದಾಯ ಹೆಚ್ಚಿದ್ದರೂ ಆ ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ವಾಸವಿದ್ದು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಿದ್ದಲ್ಲಿ ಪಡಿತರ ಚೀಟಿ ನೀಡಲು ಕ್ರಮವಹಿಸಲಾಗುವುದು ಮತ್ತು ಅರ್ಹ ಕುಟುಂಬ oಟಿಟiಟಿe ಮೂಲಕ ಅರ್ಜಿ ಸಲ್ಲಿಸಬೇಕು ಹಾಗೇಯೇ ತಹಶಿಲ್ದಾರ್ ನೀಡುವ ಆದಾಯ ಪ್ರಮಾಣ ಪತ್ರ ಮತ್ತು ಇನ್ನಿತರೆ ದಾಖಲೆಗಳನ್ನು ಪಡೆದು ಸ್ಥಳ ಪರಿಶೀಲನೆ ಮಾಡಿ ಅರ್ಹ ವಿದ್ದಲ್ಲಿ ಪಡಿತರ ಚೀಟಿ ನೀಡಲು ಕ್ರಮವಹಿಸಲಗುವುದು ಎಂದರು.