ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರೀಕರಿಗೆ ಇ-ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ವೃತ್ತಿಪರ, ಏಕ ಇ-ಖಾತಾ ನಾಗರೀಕ ಸಹಾಯವಾಣಿಯನ್ನು 9480683695 ಪ್ರಾರಂಭಿಸಲಾಗಿದೆ.
ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರ ನಿರ್ದೇಶನದಂತೆ ಸಾರ್ವಜನಿಕರಿಗೆ ಇ-ಖಾತಾಗಳು ಸುಗಮವಾಗಿ ಸಿಗುವುದನ್ನು ಖಚಿತಪಡಿಸಿಕೊಳ್ಳಲು, ಬಿಬಿಎಂಪಿಯು ತಕ್ಷಣದ ಕ್ರಮಗಳನ್ನು ಕೈಗೊಂಡಿದೆ.ಬಿಬಿಎಂಪಿಯು ಕೈಗೊಂಡಿರುವ ತಕ್ಷಣದ ಕ್ರಮಗಳ ವಿವರ ಇಂತಿದೆ.
ವೃತ್ತಿಪರ, ಏಕ ಇ-ಖಾತಾ ನಾಗರೀಕ ಸಹಾಯವಾಣಿಯನ್ನು ಪ್ರಾರಂಭ eKhata Citizen Helpline – 9480683695, 2. ಯಾರೇ ಲಂಚ ಕೇಳಿದರೆ ಅಥವಾ ವಿಳಂಬವಾದರೆ, ದಯವಿಟ್ಟು ನಾಗರೀಕ ಸಹಾಯವಾಣಿಗೆ ಕರೆ ಮಾಡಿ.ನಾಗರೀಕರು ತಾವೇ ಆನ್ಲೈನ್ನಲ್ಲಿ ಇ-ಖಾತಾವನ್ನು ರಚಿಸಲು ಪ್ರೋತ್ಸಾಹಿಸಲಾಗುತ್ತದೆ.ttps://BBMPeAasthi.karnataka.gov.in
ನಾಗರಿಕರು YouTube ತರಬೇತಿ ವೀಡಿಯೊಗಳನ್ನು ನೋಡಬಹುದು: ಕನ್ನಡ ಭಾಷೆ: https://youtu.be/JR3BxET46po ಆಂಗ್ಲ ಭಾಷೆ: https://youtu.be/GL8CWsdn3woಸಹಾಯಕ ಕಂದಾಯ ಅಧಿಕಾರಿ ಕಛೇರಿಗಳನ್ನು ನಾಗರೀಕರಿಗೆ ಸುಗಮವಾಗಿ ಇ-ಖಾತಾ ನೀಡಲು ವಿಸ್ತರಿಸಲಾಗಿದೆ:, I. 1000ಕ್ಕೂ ಅಧಿಕ ಹೆಚ್ಚುವರಿ ಕೇಸ್ ವರ್ಕರ್ ಲಾಗಿನ್ಗಳನ್ನು ನೀಡಲಾಗಿದೆ.
II. 200ಕ್ಕೂ ಅಧಿಕ ಹೆಚ್ಚುವರಿ ಸಹಾಯಕ ಕಂದಾಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. III. ಯಾರಿಂದಾದರೂ ಯಾವುದಾದರೂ ಅನಗತ್ಯ ವಿಳಂಬವಾದಲ್ಲಿ, ಪಾಲಿಕೆಯು ಕ್ರಮ ಕೈಗೊಳ್ಳುತ್ತದೆ ಮತ್ತು ನಾಗರೀಕರು ಬದಲಿ ಸಹಾಯಕ ಕಂದಾಯ ಅಧಿಕಾರಿ/ಕೇಸ್ ವರ್ಕರ್ ಗಳನ್ನು ಸಹ ಭೇಟಿ ನೀಡಬಹುದಾಗಿರುತ್ತದೆ.