ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಪಾಲಿಕೆ ಕೇಂದ್ರ ಕಚೇರಿಯ ಆವರಣದಲ್ಲಿ ೬೯ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಆಡಳಿತಗಾರರಾದ ಎಸ್.ಆರ್ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮಾಜಿ ಮಹಾಪೌರರಾದ ಹುಚ್ಚಪ್ಪ, ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಡಾ.ಕೆ.ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಪಲ್ಲವಿ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಜಂಟಿ ಆಯುಕ್ತರಾದ ಲಕ್ಷಿ÷್ಮದೇವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.