ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿ ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಗೊಂಡಿದ್ದ ನಟ ದರ್ಶನ್ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.
ಇದುವರೆಗೂ ಜಾಮೀನಿಗೆ ಪ್ರಯತ್ನಿಸಿ ಜಾಮೀನು ಸಿಗದೆ ಇದ್ದು, ಇಂದು ಮತ್ತೆ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇದರ ಜೊತೆಗೆ ಅವರ ನ್ಯಾಯಾಂಗ ಬಂಧನದ ಅವಧಿ ಕೂಡ ಇಂದಿಗೆ ಪೂರ್ಣಗೊಳ್ಳುತ್ತಿದೆ. ಒಂದುವೇಳೆ ನ್ಯಾಯಾಂಗ ಬಂಧನ ವಿಸ್ತರಣೆಯಾದರೆ ದರ್ಶನ್ ಬೆಂಗಳೂರಿಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ದರ್ಶನ್ಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿದೆ. ಬೆನ್ನಿನಲ್ಲಿ ಊತ ಇದ್ದು, ವಿಮ್ಸ್ ವೈದ್ಯರು ಸ್ಕ್ಯಾನಿಂಗ್ಗೆ ಸಲಹೆ ನೀಡಿದ್ದಾರೆ. ದರ್ಶನ್ ಅವರು ಬೆಂಗಳೂರಿನಲ್ಲೇ ತಪಾಸಣೆ ಮಾಡಿಸೋದಾಗಿ ಹಠ ಹಿಡಿದಿದ್ದಾರೆ. ಸದ್ಯಕ್ಕೆ ನೋವು ನಿವಾರಕ ಮಾತ್ರೆ ಕೊಡಿ ಸಾಕು ಎಂದು ದರ್ಶನ್ ಹೇಳುತ್ತಿದ್ದಾರೆ ಎನ್ನಲಾಗುತ್ತಿದೆ.