ಬೆಂಗಳೂರು: ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದರು. ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಹೊಸ ವರ್ಷಾಚರಣೆಗೆಂದು ಆರೋಪಿಗಳು ಸೋಲದೇವನಹಳ್ಳಿ ಬಳಿ ಡ್ರಗ್ಸ್ ಸಂಗ್ರಹಿಸಿದ್ದರು.
ಈ ವಿಚಾರ ತಿಳಿಸಿದ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾಳಿ ಮಾಡಿದರು. ದಾಳಿ ವೇಳೆ, 1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಪತ್ತೆಯಾಗಿವೆ. ಕೂಡಲೆ ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ಮಾದಕ ವಸ್ತು ಜಪ್ತಿ ಮಾಡಿದ್ದರು.
ಆರೋಪಿಗಳು ಹೊಸ ವರ್ಷಾಚರಣೆ ದಿನದಂದು ಬೆಂಗಳೂರಿನಲ್ಲಿ ಮಾರಲು ಸಜ್ಜಾಗಿದ್ದರು. ಇನ್ನು, ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್ ತರಿಸುತ್ತಿದ್ದರು. ಈ ವಿದೇಶಿ ಡ್ರಗ್ ಪೆಡ್ಲರ್ಗಳು ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದಾರೆ ಎಂದು ತನಿಖೆ ವೇಳೆ ತಿಳಿದು ಬಂದಿತ್ತು.