ಬೆಂಗಳೂರು: ನಗರದಲ್ಲಿ ವಿವಿಧೆಡೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜಾರ್ಖಂಡ್ ಮೂಲದ ವ್ಯಕ್ತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಈ ಸಂಬಂಧ ರಾಮನಗರ ಜಿಲ್ಲೆಯ ಹಾರೋಹಳ್ಳಿ, ನಗರದ ಕೆಂಗೇರಿ ಹಾಗೂ ಹೆಬ್ಬಾಳ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೆಂಗೇರಿ ಸಂಚಾರಿ ಪೊಲೀಸ್ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬಾಗಲಕೋಟೆ ಮೂಲದ ಕನಕ ಮಾದರ (19) ಎಂಬ ಯುವಕ ಮೃತಪಟ್ಟಿದ್ದಾನೆ.
ಯುವಕ ಅತ್ತಿಬೆಲೆಯ ಮಾಯಸಂದ್ರದ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ, ಬೈಕ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ಯುವಕ ಏಕಾಏಕಿ ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ನೈಸ್ ರಸ್ತೆಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆರ್ ಆರ್ ನಗರದ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.