ಬೆಂಗಳೂರು ಸೇರಿ ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಬೆಂಗಳೂರಿನಲ್ಲಿ ತುಂತುರು ಮಳೆಯಾಗಿತ್ತು. ಇಂದು ಕೂಡ ಮೋಡಕವಿದ ವಾತಾವರಣವಿದ್ದು, ಚಳಿ ಇದೆ. ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ.
ಕಾರ್ಕಳದಲ್ಲಿ ನಿನ್ನೆ ಮಳೆಯಾಗಿದೆ. ಬೀದರ್ನಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.