ಬೆಳಗಾವಿಯ ಸಣ್ಣ ಬಾಳೆಕುಂದ್ರಿಯಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ಮೇಲೆ ಹಲ್ಲೆ ಮಾಡಿದ ಮರಾಠಿ ಪುಂಡರನ್ನು ಗೂಂಡಾ ಕಾಯಿದೆಯಡಿ ಬಂದಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಯಲಹಂಕ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್ ಹರೀಶ್ ಒತ್ತಾಯಿದ್ದಾರೆ.
ಬೆಳಗಾವಿಯಲ್ಲಿ ಎಂಇಎಸ್ ಪುಂಡರು ನಿರಂತರವಾಗಿ ಭಾಷೆಯ ಹೆಸರಿಲ್ಲಿ ಸಂಘರ್ಷ ಸೃಷ್ಟಿಸಿ ಅಲ್ಲಿಯ ಸೌಹಾರ್ಧ ವಾತಾವರಣ ಹಾಳುಮಾಡುತ್ತಿದ್ದರೆ. ಇದಕ್ಕೆ ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕು ಇದೆ ಎಂದು ಹರೀಶ್ ಆರೋಪಿಸಿದರು.ಕನ್ನಡದ ನೆಲ, ಜಲ ಸಹಿತ ಎಲ್ಲಾ ಸೌಲಭ್ಯಗಳನ್ನು ಉಪಯೋಗಿಸಿ ಕನ್ನಡಿಗರ ಮೇಲೆ ದೌರ್ಜನ್ಯ ಎಸಗುತ್ತಿರುವ ಎಂಇಎಸ್ ಪುಂಡರ ವಿರುದ್ದ ಸರ್ಕಾರ ಕಾನೂನುಪ್ರಕಾರ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಇಂತಹಘಟನೆಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು ಎಂದು ಹರೀಶ್ ಒತ್ತಾಯಿಸಿದ್ದಾರೆ.
ಕನ್ನಡ ಮಾತನಾಡಿದ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಇಂತಹ ದುಷ್ಕೃತಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ ಎಸ್.ಹರೀಶ್ ಮತ ರಾಜಕಾರಣಕ್ಕಾಗಿ ಬೆಳಗಾವಿ ರಾಜಕಾರಣಿಗಳು ಪ್ರತ್ಯೇಕತವಾದಿ ಎಂಇ ಎಸ್ ಪುಂಡರನ್ನು ಬೆಂಬಲಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಪಡಿಸಿದರು.