ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿ ಸದಾಕಾಲ ನೆನೆಯಬಹುದಾದ ಮಹತ್ವದ ಸನ್ನಿವೇಶವೆಂದರೆ ಅದು 1924ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನೆಡೆದ “ಕಾಂಗ್ರೆಸ್ ಅಧಿವೇಶನ. ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ನೆಲ ಬೆಳಗಾವಿ. ಇದು ಕರ್ನಾಟಕದ ಇತಿಹಾಸದಲ್ಲಿ ಒಂದು ವಿಶೇಷ ಅಧ್ಯಾಯವಾಗಿದೆ.
ಈ ಅಧಿವೇಶನ ಸ್ಕ್ಯಾಂತಂತ್ರ್ಯ ಸಂಗ್ರಾಮದಲ್ಲಿ ಮಹತ್ತರ ಪಾತ್ರವನ್ನು ವಹಿಸಿತ್ತು. ಈಗ ಈ ಅಧಿವೇಶನಕ್ಕೆ ಶತಮಾನದ ಸಂಭ್ರಮ. ಇದರ ಸವಿನೆನಪಿಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಸಂಭ್ರಮಾಚರಣೆಯನ್ನು ವಿಶೇಷವಾಗಿ ಆಚರಿಸಲು ಉದ್ದೇಶಿಸಿವೆ.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆದರ್ಶ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ನಾಯಕರ ತ್ಯಾಗ-ಬಲಿದಾನಗಳನ್ನು ಇಂದಿನ ಯುವಜನತೆಗೆ ತಿಳಿಯಪಡಿಸುವ ರೀತಿಯಲ್ಲಿ ಈ ಈ ಶತಮಾನೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ.ಈ ಹಿನ್ನೆಲೆಯಲ್ಲಿ 27-12-2024 ಶುಕ್ರವಾರ ನೆಡೆಯಲಿರುವ ಸಮಾರಂಭವನ್ನು ಯಶಸ್ವಿಗೊಳಿಸುವಂತೆ ಕೆಪಿಸಿಸಿ ಎಸ್ಸಿ ವಿಭಾಗದ ಅಧ್ಯಕ್ಷರಾದ ಆರ್ ಧರ್ಮಸೇನಾ ಹಾಗೂ ಪೂರ್ವ ಜಿಲ್ಲಾಧ್ಯಕ್ಷರಾದ ಎಂ ಮೂರ್ತಿ. ನೇತೃತ್ವದಲ್ಲಿ ಪನ್ನೀರ್ ಸೆಲ್ವಂ. ಪಿ. ಚಿನ್ನತಂಬಿ. ಆರ್. ಮರಿಯಾ ಪ್ರಕಾಶ್. ಸೈಕ್ ಕಾಶೀಮ್ ಸಾಬ್ ಕರೆ ನೀಡಿದರು.