ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಜಿಲ್ಲಾಡಳಿತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆರೋಗ್ಯ ಇಲಾಖೆ ಪೊಲೀಸ್ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಅಂಗಳ ಇವರ ಸಹಯೋಗದಲ್ಲಿ ಬೇಟಿ ಬಚಾವ ಬೇಟಿ ಪಡಾವೋ ಕಾರ್ಯಕ್ರಮದ ಅಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೇಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಾತನಾಡಿ ಬಾಲ್ಯ ವಿವಾಹ ಮತ್ತು ಹೆಣ್ಣು ಮಕ್ಕಳ ರಕ್ಷಣೆಗೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿ ಮಾಡುತ್ತಿದ್ದರೂ ಪ್ರಕರಣಗಳು ಮರಕಳಿಸುತ್ತಿರುವುದು ವಿಷಾದನೀಯ.ಮಕ್ಕಳ ಬಗ್ಗೆ ಪೆÇಷಕರು ಸದಾ ಎಚ್ಚರಿಕೆಯಿಂದ ಇರಬೇಕು. ಮಕ್ಕಳ ಹಕ್ಕುಗಳನ್ನು ಉಲ್ಲಂಘನೆ ಆಗದ ರೀತಿಯಲ್ಲಿ ನೋಡಿಕೋಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ. ಮಕ್ಕಳ ಭಾಗವಹಿಸುವಿಕೆ, ಮಾತನಾಡುವ, ಶಿಕ್ಷಣ ಇನ್ನು ಮುಂತಾದ ಹಕ್ಕುಗಳ ಬಗ್ಗೆ ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಬಾಲ್ಯವಿವಾಹದಂತಹ ಪ್ರಕರಣಗಳನ್ನು ತಡೆಗಟ್ಟುವ ಹೊಣೆ ಪ್ರತಿಯೊಬ್ಬರ ಮೇಲಿದೆ ಎಂದರು.
ಸರಕಾರ ಈ ಬಗ್ಗೆ ಹೊಸ ಕಾನೂನು ಹಾಗೂ ಸುತ್ತೋಲೆಗಳನ್ನು ಜಾರಿ ಮಾಡುತ್ತಿದ್ದರೂ ಮಕ್ಕಳ ಹಕ್ಕುಗಳು ಅದೇ ರೀತಿಯಲ್ಲಿ ಉಲ್ಲಂಘನೆಯಾಗುತ್ತಿವೆ. ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕಾಗಿದೆ. ಮೌಲ್ಯಗಳನ್ನು ಕಳೆದುಕೊಳ್ಳುವ ನಿಟ್ಟಿನಲ್ಲಿ ಸಮಾಜ ಮುಂದುವರೆಯುತ್ತಿದೆ. ಮೌಲ್ಯಗಳನ್ನು ಮರೆತು ತಮ್ಮ ಮಕ್ಕಳು ಡಾಕ್ಟರ್, ಎಂಜನಿಯರ್ ಆಗಬೇಕು ಎಂದು ಬಯಸುತಂದೆ ತಾಯಿಗಳು ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿದೆ. ಆದರೆ ತಮ್ಮ ಮಕ್ಕಳನ್ನು ಸಮಾಜದ ಸಭ್ಯ ಪ್ರಜೆಗಳಾಗಿ ರೂಪಿಸುವಲ್ಲಿ ವಿಫಲರಾಗುತ್ತಿದ್ದಾರೆ ಎಂದರು.ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಕಾರ ಸಣ್ಣ ವಯ್ಯಸಿನ ಮಕ್ಕಳಿಗೆ ಮದುವೆ ಮಾಡುವುದು ಆಪರಾದ.ಹಾಗೆಯೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದರೆ ಜೀವಾವಧಿ ವರೆಗೂ ಶಿಕ್ಷೆ ಇದೆ.I ಎಲ್ಲ ಕಾನೂನುಗಳ ಬಗ್ಗೆ ಮಾಹಿತಿಯನ್ನು ಪಡೆಯುವುದರ ಮೂಲಕ ಆದಷ್ಟು ಮಕ್ಕಳನ್ನು ರಕ್ಷಿಸಿ ಎಂದು ಹೇಳಿದರು.
ಸಬ್ ಇನ್ಸ್ಪೆಕ್ಟರ್ ಜಯರಾಂ ಮಾತನಾಡಿ ಮಕ್ಕಳಿಗೆ ಶಿಕ್ಷಣ ಕೊಡಿಸ್ಸಿ ಸಮಾಜದಲ್ಲಿ ಒಳ್ಳೆಯ ಪ್ರಜೆಯಾಗಿ ಮಾಡ ಬೇಕಾದ ಜವಾಬ್ದಾರಿ ಪೋಷಕರ ಮೇಲಿದೆ. ಮಕ್ಕಳನ್ನು ಬಾಲ ಕಾರ್ಮಿಕ ಪದ್ಧತಿ ದೂಡಬೇಡಿ .ಅದು ಕಾನೂನು ಪ್ರಕಾರ ಅಪಾರಾದ. ಮಕ್ಕಳ ಹಕ್ಕುಗಳ ಉಲ್ಲಘನೆಯಾಗ ದಂತೆ ನೋಡಿಕೊಳ್ಳಿ ಎಂದು ಹೇಳಿದರು.ಮಾಜಿ ಬಾಲ ನ್ಯಾಯ ಮಂಡಳಿ ಸದಸ್ಯ ಟಿ ಜೇ ಸುರೇಶ್ ಮಾತನಾಡಿ ಭಾರತದಾದ್ಯಂತ ಹೆಣ್ಣು ಮಕ್ಕಳನ್ನು ಉಳಿಸುವುದು ಮತ್ತು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಇದರ ಉದ್ದೇಶ. ಈ ಕಾರ್ಯಕ್ರಮವನ್ನು ಜನವರಿ 2015 ರಂದು ಪ್ರಾರಂಭಿಸಲಾಯಿತು.
ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯ ಗುರಿ, ಹೆಣ್ಣು ಶಿಶುಹತ್ಯೆ ತಡೆಯುವುದು, ಪ್ರತಿ ಹೆಣ್ಣುಮಗುವಿನ ಸುರಕ್ಷತೆ ಮತ್ತು ರಕ್ಷಣೆಯನ್ನು ಖಚಿತಪಡಿಸಿ ಕೊಳ್ಳಲು ಹೊಸ ಯೋಜನೆಗಳನ್ನು ಅಭಿವೃದ್ಧಿಪಡಿಸಿ ಮತ್ತುಸಹಯೋಗದೊಂದಿಗೆ ಕೆಲಸ ಮಾಡಿ.ಪ್ರತಿ ಹೆಣ್ಣು ಮಗುವಿಗೂ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ಇದರ ಉದ್ದೇಶ. ಹೆಣ್ಣು ಮಕ್ಕಳ ಲಿಂಗ ಅನುಪಾತದಲ್ಲಿನ ಕುಸಿತವನ್ನು ತಡೆಯುವುದು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಉದ್ದೇಶವಾಗಿದೆ. ಆದ್ದರಿಂದ, ದೇಶದಲ್ಲಿ ಮಹಿಳೆಯರ ಸ್ಥಾನಮಾನವನ್ನು ಸುಧಾರಿಸುವ ಸಲುವಾಗಿ ಇದು ಮಹಿಳಾ ಸಬಲೀಕರಣವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.
ವಕೀಲರಾದ ರಾಜೇಶ್ ಮಾತನಾಡಿ ಎಲ್ಲ ಕಾನೂನುಗಳು ಸಂವಿಧಾನ ಅಡಿಯಲ್ಲಿ ಜಾರಿಗೆ ಬರುತ್ತದೆ. ಸಂ ವಿಧಾನದ ಬಗ್ಗೆ ಅರಿವು ಹೊಂದಿ ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ನಾಗರಾಜುರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರುದ್ರವ್ವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಾಂತಮಲ್ಲಪ್ಪ ಗ್ರಾಮ ಪಂಚಾಯತಿ ಸದಸ್ಯರಾದ ವೃಶಬೇಂದ್ರ ಗೌರಮ್ಮ ಚಿಕ್ಕತಾಯಮ್ಮ ಹಾಗೂ ಓಖಐಒ ಸಂಘದ ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರ ಆಶಾ ಕಾರ್ಯಕರ್ತೆಯರೂ ಭಾಗವಹಿಸಿದ್ದರು.