ರಾಮನಗರ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ನಗರದ ಕನಕಪುರ ಸರ್ಕಲ್ ಬಳಿ ಗುರುವಾರ ಬೆಳಗಿನ ಜಾವ ನಡೆದ ಘಟನೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಮಳಗಾಳು ಗ್ರಾಮದಯಶವಂತ್ ಗೌಡ (19) ಮೃತ ಪಟ್ಟಿದ್ದು ಅಪಘಾತದಲ್ಲಿ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದರಬಸಕ್ಕೆ ದ್ವಿಚಕ್ರ ವಾಹನ ಸವಾರ ಯಶವಂತ್ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಪೋಲಿಸ್ ಎಎಸ್ಐಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.ರಾಮನಗರ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.