ಬೆಂಗಳೂರು: ರಾಜಾನುಕುಂಟೆ ಪೊಲೀಸ್ ಠಾಣ ವ್ಯಾಪ್ತಿಯ ಹೊನ್ನೇನಹಳ್ಳಿ ಬಳಿ ಇಂದು ಮುಂಜಾನೆ ಮೋಟರ್ ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಚಿನ್ನಾಭರಣ ದೋಚಿರುವ ಘಟನೆ ವರದಿಯಾಗಿದೆ.
ಇಂದು ಬೆಳಿಗ್ಗೆ ನಸುಕಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಬಾಲಕೃಷ್ಣ ಎಂಬುವವರು ತಮ್ಮ ಮೋಟಾರ್ ಬೈಕ್ ನಲ್ಲಿ ಹೋಗುತ್ತಿರುವಾಗ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ಬಾಲಕೃಷ್ಣರ ಬಳಿಯಿಂದ ಉಂಗುರ ಮೊಬೈಲ್ ಹಾಗೂ ನಗದು ಹಣ ದೋಚಿಕೊಂಡು ಪರಾರಿಯಾಗಿರುತ್ತಾರೆ.ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿರುತ್ತದೆ.