ಗೌತಮ್ ಗಂಭೀರ್ ಅವರನ್ನು ನೂತನ ಕೋಚ್ ಮಾಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಇದೀಗ ಭಾರತದ ಟಿ20 ಕ್ರಿಕೆಟ್ ತಂಡಕ್ಕೆ ಹೊಸ ಕ್ಯಾಪ್ಟನ್ ಆಯ್ಕೆ ಬಗ್ಗೆ ತಲೆ ಕೆಡಿಸಿಕೊಂಡಿದೆ. ಇತ್ತೀಚಿನ ವರದಿಗಳ ಪ್ರಕಾರ ಬಿಸಿಸಿಐ ಸೆಲೆಕ್ಟರ್ಸ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬದಲಿಗೆ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರನ್ನು ನೂತನ ಕ್ಯಾಪ್ಟನ್ ಆಗಿ ನೇಮಕ ಸಾಧ್ಯತೆ ಇದೆ.
ಹಾರ್ದಿಕ್ ಪಾಂಡ್ಯ ಮುಂಬರುವ ಶ್ರೀಲಂಕಾ ಪ್ರವಾಸದಲ್ಲಿ ನಡೆಯಲಿರುವ ಟಿ20 ಕ್ರಿಕೆಟ್ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿ ನಂತರ ಏಕದಿನ ಕ್ರಿಕೆಟ್ ಸರಣಿಯಿಂದ ವಿಶ್ರಾಂತಿ ತೆಗೆದುಕೊಳ್ಳುವುದಾಗಿ ಬಿಸಿಸಿಐ ಮುಂದೆ ಮನವಿ ಇಟ್ಟಿದ್ದರು. ಆದರೆ, ಇದು ಹೆಡ್ ಕೋಚ್ ಗೌತಮ್ ಗಂಭೀರ್ಗೆ ಅಸಮಾಧಾನ ತಂದಿದೆ ಎನ್ನಲಾಗಿದೆ.
ಒಡಿಐ ಮತ್ತು ಟಿ20 ಎರಡೂ ಸರಣಿಗಳಲ್ಲಿ ಪಾಲ್ಗೊಳ್ಳುವಂತೆ ತಾಕೀತು ಮಾಡಿದ್ದಾರೆ. ಇದೇ ಕಾರಣಕ್ಕೆ ಟಿ20 ತಂಡದ ಕ್ಯಾಪ್ಟನ್ಸಿಯಿಂದಲೂ ಹಾರ್ದಿಕ್ ಅವರನ್ನು ಕೆಳಗಿಳಿಸಿ ಸೂರ್ಯಕುಮಾರ್ ಯಾದವ್ ಅವರನ್ನು 2026 ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿವರೆಗೆ ಕ್ಯಾಪ್ಟನ್ ಮಾಡುವ ದಿಟ್ಟ ನಿರ್ಧಾರಕ್ಕೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಬಂದಿದೆ.