2025ರ ಫೆಬ್ರವರಿ 19ರಿಂದ ಮಾರ್ಚ್ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಾಕ್ ಆತಿಥ್ಯದಲ್ಲಿ ನಡೆಯಲಿದೆ. ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾದ್ರೆ ಮಾರ್ಚ್ 10 ರಂದು ಮೀಸಲು ದಿನ ಇರಲಿದೆ. ಪಾಕಿಸ್ತಾನದ ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ.
ಸದ್ಯ ಭಾರತ ಮತ್ತು ಪಾಕ್ ನಡುವಿನ ಪಂದ್ಯ ಲಾಹೋರ್ನಲ್ಲಿ ನಿಗದಿಯಾಗಿದೆ. ಆದ್ರೆ ಪಾಕಿಸ್ತಾನಕ್ಕೆ ತೆರಳಲು ಬಿಸಿಸಿಐ ಹಿಂದೇಟು ಹಾಕಿದೆ.
ತನ್ನ ಎಲ್ಲಾ ಪಂದ್ಯಗಳನ್ನು ಒಂದೇ ನಗರದಲ್ಲಿ ಆಡುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಭಾರತಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅದಕ್ಕಾಗಿ ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್ ಮೈದಾನದಲ್ಲೇ ನಿಗದಿಪಡಿಸಲಾಗಿತ್ತು. ಆದ್ರೆ ಭಾರತ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ.
ದುಬೈ ಅಥವಾ ಶ್ರೀಲಂಕಾದಲ್ಲಿ ತನ್ನ ಪಂದ್ಯಗಳನ್ನು ಆಯೋಜಿಸುವಂತೆ ಐಸಿಸಿಗೆ ಕೇಳಿಕೊಂಡಿದೆ ಎಂದು ಬಿಸಿಸಿಐ ಖಚಿತಪಡಿಸಿದೆ. ಕಳೆದ ಮೇ ತಿಂಗಳಲ್ಲಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲಿದೆ ಎಂದು ಹೇಳಿದ್ದರು. ಇದೀಗ ಪಾಕ್ಗೆ ತೆರಳುವುದಿಲ್ಲ ಎಂದು ಬಿಸಿಸಿಐ ಖಚಿತಪಡಿಸಿದೆ.