`ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವನ್ನು ಕನ್ನಡ ಕಲಾಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕುಟುಂಬ ಸಮೇತ ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ. ಕನ್ನಡ ಚಿತ್ರಗಳಿಗೆ ಜನರು ಬರುತ್ತಿಲ್ಲ ಎಂಬ ಮಾತನ್ನು “ಭೈರತಿ ರಣಗಲ್” ಚಿತ್ರ ದೂರ ಮಾಡಿದೆ. ಶಿವರಾಜಕುಮಾರ್ ಅವರ ಅದ್ಭುತ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಯಶಸ್ಸಿನ ಖುಷಿಯನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.
“ಮಫ್ತಿ” ಚಿತ್ರದಲ್ಲಿ ನನ್ನ “ಭೈರತಿ ರಣಗಲ್” ಪಾತ್ರವನ್ನು ನೀವು ಇಷ್ಟಪಟ್ಟಿದ್ದಿರಿ. ಆದರೆ “ಭೈರತಿ ರಣಗಲ್” ಚಿತ್ರದ ರಣಗಲ್ ಪಾತ್ರವನ್ನು ನೀವು ಹೃದಯಕ್ಕೆ ತೆಗೆದುಕೊಂಡಿದ್ದೀರ. ನಿಮಗೆ ತುಂಬು ಹೃದಯದ ಧನ್ಯವಾದ ಎಂದು ಅಭಿಮಾನಿಗಳಿಗೆ ವಿಶೇಷ ಧನ್ಯವಾದ ತಿಳಿಸಿ ಮಾತನಾಡಿದ ಶಿವರಾಜಕುಮಾರ್, ನಮ್ಮ ಸಂಸ್ಥೆಯಿಂದ ನಿರ್ಮಾಣವಾದ ಎರಡನೇ ಚಿತ್ರವಿದು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂಬುದಕ್ಕೆ ಈ ಚಿತ್ರ ಉದಾಹರಣೆ. ಈ ಯಶಸ್ಸು ನನ್ನೊಬ್ಬನದಲ್ಲ. ಇಡೀ ತಂಡದು.
ಮುಂದೆ “ಮಫ್ತಿ 2” ಮಾಡಬೇಕೆಂಬುದು ಅಭಿಮಾನಿಗಳ ಆಸೆ. ಖಂಡಿತ ಮಾಡುತ್ತೇನೆ. ಆದರೆ ಶೀರ್ಷಿಕೆ “ಮಫ್ತಿ 2” ಅಂತ ಇರುವುದಿಲ್ಲ. ಸದ್ಯದಲ್ಲೇ ಆ ಚಿತ್ರದ ಶೀರ್ಷಿಕೆಯನ್ನು ತಿಳಿಸುತ್ತೇನೆ ಎಂದರು.ಈ ಚಿತ್ರ ಆಗಲು ಮುಖ್ಯ ಕಾರಣ ಶಿವಣ್ಣ ಅಭಿಮಾನಿಗಳು. ಅವರುಗಳು “ಮಫ್ತಿ” ಚಿತ್ರದ ಯಶಸ್ಸಿನ ನಂತರ, “ರಣಗಲ್” ಚಿತ್ರ ಮಾಡಿ ಎಂದರು.
ಈ ಚಿತ್ರ ಆಗಲು ಅವರೆ ಮುಖ್ಯ ಕಾರಣ ಎನ್ನಬಹುದು. ಆನಂತರ ನನ್ನನ್ನು ಕರೆದು ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು “ಭೈರತಿ ರಣಗಲ್” ಚಿತ್ರ ಮಾಡಲು ಅಡ್ವಾನ್ಸ್ ನೀಡಿದರು.ಅವರಿಗೆ ಹಾಗೂ ರಣಗಲ್ ಪಾತ್ರಕ್ಕೆ ಜೀವ ತುಂಬಿದ ಶಿವರಾಜಕುಮಾರ್ ಅವರಿಗೆ ಮತ್ತು ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ನನ್ನ ತುಂಬು ಹೃದಯದ ಧನ್ಯವಾದ ಎಂದರು ನಿರ್ದೇಶಕ ನರ್ತನ್.