ಬೆಂಗಳೂರು: ಕರ್ನಾಟಕ ಮಕ್ಕಳ ಹಕ್ಕುಗಳ ವೀಕ್ಷಣಾಲಯ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಸಂಸತ್ ಸಮಾಲೋಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರು ಹಾಜರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜ್ಯದ 25 ಜಿಲ್ಲೆಗಳ 62 ವಿದ್ಯಾರ್ಥಿಗಳು ನಿರಾಸೆಗೊಂಡರು.
ಗೈರು ಹಾಜರು ಕುರಿತು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಕಾರ್ಯಕ್ರಮದ ಬಗ್ಗೆ ಆಯೋಜಕರು ನನಗೆ ಮಾಹಿತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ.
ಈ ನಡುುವೆ ಸಮಾಲೋಚನೆ ವೇಳೆ ಮಕ್ಕಳು, ಶಿಕ್ಷಣ, ಆರೋಗ್ಯ ಮತ್ತು ಪರಿಸರ ಸಮಸ್ಯೆಗಳ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದರು.
ಗ್ರಾಮೀಣ ಮತ್ತು ಗಡಿಭಾಗದ ಶಾಲೆಗಳಲ್ಲಿ ವಿಶೇಷವಾಗಿ ಗಣಿತ ಮತ್ತು ವಿಜ್ಞಾನ ವಿಷಯಗಳ ಶಿಕ್ಷಕರ ಕೊರತೆ ವಿಚಾರ ಪ್ರಸ್ತಾಪಿಸಿ ಹಲವರ ಗಮನಸೆಳೆದರು, ಇದು ಶೈಕ್ಷಣಿಕ ಹಿನ್ನಡೆಗೆ ಕಾರಣವಾಗಿದ್ದು, ಈ ಕೊರತೆಗಳನ್ನು ನೀಗಿಸಲು ಕೂಡಲೇ ನೇಮಕಾತಿ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು.