ಹುಬ್ಬಳ್ಳಿ: ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಚಿಕಿತ್ಸೆ ಫಲಿಸದೆ ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವು ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಪತ್ನಿ ಸಾವಿನ ಸುದ್ದಿ ತಿಳಿದು ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ನಡೆದಿದೆ. ಮಲ್ಲೇಶ್(25) ಆತ್ಮಹತ್ಯೆಗೆ ಯತ್ನಿಸಿದ ರಾಧಿಕಾ ಪತಿ. ಸದ್ಯ ಮಲ್ಲೇಶ್ಗೆ ಕಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ 2 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬೆಳಗಾವಿ ಮೂಲದ ರಾಧಿಕಾ ಗಡ್ಡಿಹೊಳಿ ಸಾವಿನ ಮನೆ ಸೇರಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ರಾಧಿಕಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇದನ್ನು ಕಂಡು ಪತಿಕೂಡ ಮನನೊಂದು ಆತ್ಮ ಹತ್ಯೆಗೆ ಯತ್ನಿಸಲಾಗಿದೆ ಎಂದು ಹೇಳಲಾಗಿದೆ.