ರಾಯಚೂರು: ಮಟನ್ ಊಟ ಸೇವಿಸಿದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಸಿರಿವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ.
ಭೀಮಪ್ಪ(60), ಈರಮ್ಮ(54) ಮಲ್ಲೇಶ್(19), ಪಾರ್ವತಿ(17) ಎಂಬುವರೇ ಮೃತ ದುರ್ದೈವಿಗಳಾಗಿದ್ದಾರೆ.
ಮೇಲ್ನೋಟಕ್ಕೆ ಫುಡ್ ಪಾಯಿಸನ್ನಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದರು ಮೂಲಗಳ ಪ್ರಕರಣ ಕುಟುಂಬ ಕಲಹದಿಂದಾಗಿ ಊಟದಲ್ಲಿ ವಿಷ ಬೆರೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕಾಸ್ಪದ ಮಾತುಗಳು ಕೇಳಿಬಂದಿವೆ.
ಪ್ರಕರಣ ದಾಖಲಿಸಿಕೊಂಡಿರುವ ಸಿರಿವಾರ ಪೊಲೀಸರು ಎಫ್ಎಸ್ಎಲ್ ವರದಿ ಆಧಾರದ ಮೇಲೆ ತನಿಖೆ ಕೈಗೊಳ್ಳಲು ಮುಂದಾಗಿದ್ದಾರೆ.