ಹುಬ್ಬಳ್ಳಿ: ಕಳೆದ ಡಿಸೆಂಬರ್ 22ರಂದು ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡಿದ್ದ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಮತ್ತೋರ್ವ ಅಯ್ಯಪ್ಪ ಭಕ್ತ ಇಂದು ಸಾವನ್ನಪ್ಪಿದ್ದಾನೆ.
ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರಕಾಶ್ ಬಾರಕೇರಾ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಇವರ ಸಾವಿನಿಂದಾಗಿ ಇದುವರೆಗೆ ಮೃತಪಟ್ಟವರ ಸಂಖ್ಯೆ 8ಕ್ಕೇರಿದ್ದು, ಉಳಿದ ಇನ್ನೋರ್ವ ಭಕ್ತ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.