ಬೆಂಗಳೂರು: ಜಾಲಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮಗೊಂಡನಹಳ್ಳಿಯಲ್ಲಿ ವಾಸವಿದು ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ೧೦ ತಿಂಗಳ ಗಂಡು ಮಗುವನ್ನು ಸಹ ಆಕೆಯಿಂದ ಪಡೆದು ಆಕೆಯು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,
ಆತ್ಮಹತ್ಯೆಗೆ ಶರಣಾಗಲುದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಆರೋಪಿಯನ್ನು ಜಾಲಹಳ್ಳಿ ಪೊಲೀಸರು ಬಂಧಿಸಿರುತ್ತಾರೆ.ಕೌಶಿಕ್ ಎಂಬ ಆರೋಪಿಯನ್ನು ಪೋಕ್ಸೋ ಕಾಯ್ದೆ ಬಂಧಿಸಿರುವ ಪೊಲೀಸರು ನ್ಯಾಯಾಲಯದಿಂದ ಪೊಲೀಸ್ ವಶಕ್ಕೆ ಪಡೆದು ತನಿಖೆ ಕೈಗೊಂಡಿರುತ್ತಾರೆ.
ಎಸ್ಎಸ್ಎಲ್ಸಿ ಓದಿರುವ ಈತನು ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದನು ಎಂದು ಪೊಲೀಸರು ತಿಳಿಸಿರುತ್ತಾರೆ.